Sunday, January 19, 2025
ಬೆಂಗಳೂರುಸುದ್ದಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ – ಕಹಳೆನ್ಯೂಸ್

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಆರು ಮಂದಿಗೆ ಹಾಗೂ ಒಂದು ಸೇವಾ‌ ಸಂಸ್ಥೆಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಯಿತು. 10 ಜನರಿಗೆ ಪೌಷ್ಟಿಕ ಆಹಾರ ಕಿಟ್ ವಿತರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಇಲಾಖೆಯ ಕಾರ್ಯದರ್ಶಿಗಳಾದ ಶಮ್ಲಾ, ವಿಕಲಚೇತರ ಹಾಗೂ ಹಿರಿಯ ಸಬಲೀಕರಣ ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ವಿಕಲ ಚೇತನರ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತರಾದ ದಾಸ್ ಸೂರ್ಯವಂಶಿ, ಖ್ಯಾತ ಮನೋ ವೈದ್ಯರಾದ ಡಾ.ಸಿ.ಆರ್.ಚಂದ್ರಶೇಖರ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು