Friday, October 4, 2024
ದಕ್ಷಿಣ ಕನ್ನಡಮಂಗಳೂರುಸುದ್ದಿ

ನನ್ನಂಥವನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಋಣಿ: ಕಿಶೋರ್ ಕುಮಾರ್-ಕಹಳೆ ನ್ಯೂಸ್

ಮಂಗಳೂರು: ಹಣಬಲ, ಜಾತಿ ಬಲ ಇಲ್ಲದ ನನ್ನಂಥವರಿಗೂ ಮಹತ್ವದ ಜವಾಬ್ದಾರಿ ಸಿಗುವುದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಬಡ ಕೃಷಿ ಕುಟುಂಬದಲ್ಲಿ ಹುಟ್ಟಿದ ನನಗೆ ಈ ಅವಕಾಶ ಕೊಟ್ಟಿರುವುದಕ್ಕೆ ಋಣಿ. ನನ್ನಿಂದಾಗಿ ಪಕ್ಷಕ್ಕೆ ಯಾವುದೇ ಕಪ್ಪು ಚುಕ್ಕೆಬಾರದಂತೆ ಕೆಲಸ ಮಾಡುವೆ ಎಂದು ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಹೇಳಿದರು.
ನಾಮಪತ್ರ ಸಲ್ಲಿಕೆಗೆ ಮೊದಲು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಲ್ಲ ಕಾರ್ಯಕರ್ತರ ಆಶೋತ್ತರಗಳಿಗೆ ಸ್ಪಂದಿಸುವೆ ಎಂದರು.

ಸAಸದ ಕ್ಯಾ| ಬ್ರಿಜೇಶ್ ಚೌಟ ಮಾತ ನಾಡಿ, ಬಿಜೆಪಿಯು ಕಾರ್ಯಕರ್ತರ ಪಕ್ಷ ಎಂಬುದಕ್ಕೆ ಈಗ ಕಾರ್ಯಕರ್ತನಿಗೆ ಅವಕಾಶ ನೀಡಿರುವುದು ಸಾಕ್ಷಿ. ಪಕ್ಷ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದು, ಕಿಶೋರ್ ಕುಮಾರ್ ಅವರ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸುವುದಾಗಿ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಈ ಕ್ಷೇತ್ರದಿಂದ ಗೆದ್ದು ಮೇಲ್ಮನೆಗೆ ಹೋದ ಕೋಟ ಶ್ರೀನಿವಾಸ ಪೂಜಾರಿ ಜನಪ್ರತಿನಿಧಿಯಾಗಿ ಸ್ಥಳೀಯ ಸಂಸ್ಥೆ ಪ್ರತಿನಿಧಿಗಳಿಗೆ ವಿಶೇಷ ಕೊಡುಗೆ ನೀಡುವುದರೊಂದಿಗೆ ಪಂಚಾಯತ್‌ರಾಜ್ ವ್ಯವಸ್ಥೆ ಹಾಗೂ ಜನರ ಭಾವನೆಗಳನ್ನು ಸಮರ್ಥವಾಗಿ ಅರ್ಥ ಮಾಡಿಕೊಂಡವರು. ಅವರ ಸ್ಥಾನಕ್ಕೆ ಕಿಶೋರ್ ಕುಮಾರ್ ಒಬ್ಬ ಸಮರ್ಥ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಅವರ ಗೆಲುವಿಗೆ ಶ್ರಮಿಸಲಾಗುವುದು ಎಂದರು.

ಜಾಹೀರಾತು
ಜಾಹೀರಾತು

ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಮಾತನಾಡಿ, ಅಭ್ಯರ್ಥಿಯ ಗೆಲುವಿಗಾಗಿ ಪ್ರತಿ ಮಂಡಲದ ಪ್ರತಿ ಮಹಾಶಕ್ತಿ ಕೇಂದ್ರಗಳಲ್ಲಿ ಮತದಾರರನ್ನು ಭೇಟಿಯಾಗಲಿದ್ದೇವೆ. ಪಕ್ಷದ ನಿಗದಿತ ಮತಗಳಿಂದಲೂ ಹೆಚ್ಚು ಮತ ಬರುವಂತೆ ಕೆಲಸ ಮಾಡಲಿದ್ದೇವೆ ಎಂದು ಹೇಳಿದರು.

ಶಾಸಕರಾದ ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಭಾಗೀರಥಿ ಮುರುಳ್ಯ, ರಾಜೇಶ್ ನಾೖಕ್, ಯಶಪಾಲ್ ಸುವರ್ಣ, ಪ್ರಮೋದ್ ಮಧ್ವರಾಜ್, ಪ್ರತಾಪಸಿಂಹ ನಾಯಕ್, ಮೇಯರ್ ಮನೋಜ್ ಕುಮಾರ್, ಉಪಮೇಯರ್ ಭಾನುಮತಿ ಮತ್ತಿತರು ಉಪಸ್ಥಿತರಿದ್ದರು.

ಕಿಶೋರ್ ಗೆಲುವು ನಿಶ್ಚಿತ: ನಳಿನ್
ಮಂಗಳೂರು : ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಯುವ ನಾಯಕ ಕಿಶೋರ್ ಕುಮಾರ್ ಪುತ್ತೂರು ಅವರು ಅತ್ಯಂತ ಹೆಚ್ಚಿನ ಬಹುಮತದೊಂದಿಗೆ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಪಕ್ಷ ಯುವಕರಿಗೆ ಆದ್ಯತೆ ನೀಡಿದ್ದು, ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯ, ರಾಷ್ಟ್ರ ಮಟ್ಟದ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡವರು ಎಂದಿದ್ದಾರೆ.