Recent Posts

Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಪದ ಸಂಪತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ಇಲ್ಲಿ ಕನ್ನಡ ಪದ ಸಂಪತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮವು ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮವನ್ನು ಬೆಂಗಳೂರಿನ ಸಂಶೋಧನಾ ಸಾಹಿತಿಗಳಾದ ಶ್ರೀ ಆಗುಂಬೆ ಎಸ್ ನಟರಾಜ್ ಇವರು ಶ್ರೀ ಮದ್ಭಗವದ್ಗೀತಾ ಹೊತ್ತಗೆಗೆ ಪುಷ್ಪಾರ್ಚನೆಗೈಯುವ ಮೂಲಕ ಉದ್ಘಾಟನೆ ಮಾಡಿ ಶುಭಹಾರೈಸಿದರು. ಇದೇ ವೇಳೆ ಅಕ್ಷರ ಗಣಪ ಚಿತ್ತಾರವನ್ನು ಪ್ರಾಂಶುಪಾಲ ಕೃಷ್ಣಪ್ರಸಾದ್ ಇವರು ಅನಾವರಣಗೊಳಿಸಿ ಅಧ್ಯಕ್ಷಿಯ ಮಾತುಗಳನ್ನಾಡಿದರು ಬಳಿಕ ಕನ್ನಡ ಸಂಸ್ಕೃತಿ ಸೇವಾ ಭಾರತೀಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಓಂಕಾರ ಪ್ರಿಯ ಬಾಗೇಪಲ್ಲಿ ಇವರು ಕನ್ನಡ ಪದ ಸಂಪತ್ತು ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವೇದಿಕೆಯಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಯತಿರಾಜ್ ಮತ್ತು ಸಾಹಿತ್ಯ ಸಂಘದ ನಿರ್ದೇಶಕಿ ರಶ್ಮಿತಾ ಉಪಸ್ಥಿತರಿದ್ದರು.
ಪ್ರಥಮ ವಾಣಿಜ್ಯ ವಿಭಾಗದ ಲಿಖಿತ್ ವೈಯಕ್ತಿಕ ಗೀತೆ ಗಾಯನ ಮಾಡಿ, ಅರ್ಥಶಾಸ್ತ್ರ ಉಪನ್ಯಾಸಕಿ ಸಂಧ್ಯಾ ವಂದಿಸಿ, ಕನ್ನಡ ಉಪನ್ಯಾಸಕಿ ರಶ್ಮಿತಾ ಸ್ವಾಗತಿಸಿ, ನಿರೂಪಿಸಿದರು. ಶಾಂತಿ ಮಂತ್ರದೊAದಿಗೆ ಕಾರ್ಯಕ್ರಮವು ಕೊನೆಗೊಂಡಿತು.