Sunday, January 19, 2025
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಸೆಕ್ಸ್‌ ವಿಡಿಯೋ ಬಹಿರಂಗ ಪಡಿಸುವುದಾಗಿ ಬೆದರಿಸಿ ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡಿದ ಆಯಿಷಾ ರೆಹಮತ್ ಮಾಸ್ಟರ್ ಮೈಂಡ್ ; ಉದ್ಯಮಿ ಮುಮ್ತಾಝ್‌ ಆಲಿ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಕಹಳೆ ನ್ಯೂಸ್

ಮಂಗಳೂರು : ಎಂಎಲ್‌ಸಿ ಬಿ.ಎಂ.ಫಾರೂಕ್ ಹಾಗೂ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೋದರ, ಉದ್ಯಮಿ ಮುಮ್ತಾಜ್ ಆಲಿ ನಾಪತ್ತೆಯಾಗಿದ್ದು, ಸೋಮವಾರ ಶವ ಪತ್ತೆಯಾಗಿದೆ. ಇದೇ ವೇಳೆ ಘಟನೆ ಸಂಬಂಧಿಸಿ ಇವರ ಇನ್ನೊಬ್ಬ ಸೋದರ ಹೈದರ್ ಆಲಿ ಕಾವೂರು ಠಾಣೆಗೆ ದೂರು ನೀಡಿದ್ದು ಮುಲ್ತಾಜ್ ಆಲಿ ಅವರನ್ನು ಬ್ಲಾಕ್ಟೇಲ್ ಮಾಡಿದ್ದಾರೆಂದು ಹೇಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟಿದ್ದಾರೆ.

ಸುರತ್ಕಲ್ ಬಳಿಯ ಕಾಟಿಪಳ್ಳ ನಿವಾಸಿ ಮಹಿಳೆ ಸೇರಿದಂತೆ ಆರು ಮಂದಿಯ ವಿರುದ್ಧ ಮುಮ್ತಾಜ್ ಆಲಿ ಸೋದರ ಹೈದರ್ ಆಲಿ ದೂರು ನೀಡಿದ್ದಾರೆ. ಮುಮ್ತಾಜ್ ಆಲಿ ಅವರನ್ನು ಹನಿಟ್ರಾಪ್ ಮೂಲಕ ಬ್ಲಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಬೇಡಿಕೆ ಇಟ್ಟಿದ್ದಾಗಿ ಆರೋಪಿಸಲಾಗಿದೆ. ಕಾಟಿಪಳ್ಳ ನಿವಾಸಿ ರೆಹಮತ್, ಸುರತ್ಕಲ್ ಆಸುಪಾಸಿನ ನಿವಾಸಿಗಳಾದ ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶೋಯಿಬ್, ಸತ್ತಾರ್ ಮತ್ತು ಮುಮ್ತಾಜ್ ಆಲಿಯವರ ಕಾರು ಚಾಲಕ ಸಿರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆಯಿಷಾ ರೆಹಮತ್ ಮಾಸ್ಟರ್ ಮೈಂಡ್ :

ಸುರತ್ಕಲ್ ಕೃಷ್ಣಾಪುರದ 7ನೇ ಬ್ಲಾಕ್ ನಿವಾಸಿ ಆಯಿಷಾ ರೆಹಮತ್ ಎಂಬಾಕೆಯೇ ಪ್ರಕರಣದ ಮಾಸ್ಟರ್ ಮೈಂಡ್. ಮುಮ್ತಾಜ್ ಅಲಿಗೆ ನಿರಂತರ ಬೆದರಿಕೆ, ಹಣದ ಬೇಡಿಕೆ ಇಟ್ಟಿದ್ದ ಈಕೆಯ ಪತಿ ಶೋಯೆಬ್ ಕೂಡ ಸಾಥ್ ನೀಡಿದ್ದ. ಆಯಿಷಾ ರೆಹಮತ್ ಹಲವು ವರ್ಷಗಳಿಂದ ಮುಮ್ತಾಜ್ ಅಲಿಗೆ ಪರಿಚಯವಿದ್ದು, ಮುಮ್ತಾಜ್ ಅವರ ಸಂಸ್ಥೆಯಲ್ಲೇ ಉದ್ಯೋಗಕ್ಕಿದ್ದಳು. ಈ ನಡುವೆ 2-3 ತಿಂಗಳಿಂದೀಚೆಗೆ ಸೆಕ್ಸ್ ವಿಡಿಯೊ ಇದೆ ಎಂದು ಹೇಳಿ ಮುಮ್ತಾಜ್‌ಗೆ ಕಿರುಕುಳ ನೀಡಲಾರಂಭಿಸಿದ್ದಳು. ಮಾತ್ರವಲ್ಲದೆ, ವಿವಾಹವಾಗುವಂತೆ ಬೆದರಿಕೆಯೊಡ್ಡುತ್ತಿದ್ದಳು. ವಿವಾಹಕ್ಕೆ ಮುಮ್ತಾಜ್ ನಿರಾಕರಿಸಿದ್ದರು ಎನ್ನಲಾಗಿದೆ. ಅದರ ಬಳಿಕ ಹಣಕ್ಕಾಗಿ ಪದೇ ಪದೆ ಸತಾಯಿಸುತ್ತಿದ್ದ ರೆಹಮತ್‌ಗೆ 50 ಲಕ್ಷ ರು.ಗಳನ್ನು ಮುಮ್ತಾಜ್ ನೀಡಿದ್ದಾರೆ. ಅದರಲ್ಲಿ 25 ಲಕ್ಷ ರು.ಗಳನ್ನು ಚೆಕ್ ಮೂಲಕ ಪಾವತಿಸಿದ್ದಾರೆ. ನಂತರವೂ ಹೆಚ್ಚಿನ ಹಣಕ್ಕೆ ರೆಹಮತ್ ಬೇಡಿಕೆ ಇಟ್ಟಾಗ ಮುಮ್ತಾಜ್ ನಿರಾಕರಿಸಿದ್ದಾರೆ. ಈ ವೇಳೆ ಮುಮ್ತಾಜ್ ಅವರ ರಾಜಕೀಯ ವಿರೋಧಿ ಅಬ್ದುಲ್ ಸತ್ತಾರ್‌ನ್ನು ಸಂಪರ್ಕಿಸಿ ಎಲ್ಲ ವಿಚಾರ ತಿಳಿಸಿದ್ದಾಳೆ. ಈ ಕಾಲ್ ರೆಕಾರ್ಡ್‌ನ ಆಡಿಯೊ ಇಟ್ಟುಕೊಂಡು ಸತ್ತಾರ್ ಮತ್ತು ಉಳಿದ ಮೂವರು ಮುಮ್ತಾಜ್ ಅಲಿಗೆ 2 ಕೋಟಿ ರು. ಕೊಡುವಂತೆ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ. ಈ ನಡುವೆ ಆಯಿಷಾ ರೆಹಮತ್, ಮುಮ್ತಾಜ್ ಅವರ ಪತ್ನಿಯನ್ನು ಭೇಟಿಯಾಗಿದ್ದು, ಇದರ ಬಳಿಕ ಮುಮ್ತಾಜ್ ಕುಟುಂಬದಲ್ಲಿ ತೀವ್ರ ಗೊಂದಲ ಸೃಷ್ಟಿಯಾಗಿತ್ತು.

ಸಾರ್ವಜನಿಕರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ :

ಸೋಮವಾರ ಬೆಳಗ್ಗೆ 3.10ರ ವೇಳೆಗೆ ಮನೆಯಿಂದ ಹೊರಟಿದ್ದ ಮುಮ್ತಾಜ್ ಅಲಿ ಸುಮಾರು 4.30ರ ವೇಳೆಗೆ ಕೂಳೂರು ಸೇತುವೆ ಬಳಿ ಬಿಎಂಡಬ್ಲ್ಯೂ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದರು. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಅಗ್ನಿಶಾಮಕ, ಸ್ಥಳೀಯ ಯುವಕರು ಸೇರಿ ಒಟ್ಟು ಆರು ತಂಡಗಳು ರಾತ್ರಿವರೆಗೆ ಶೋಧ ಕಾರ್ಯ ನಡೆಸಿದರೂ ದೇಹ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಗ್ಗೆ 6 ಗಂಟೆಗೆ ಮತ್ತೆ ಶೋಧ ಆರಂಭವಾಯಿತು. ಸುಮಾರು 10.30ರ ವೇಳೆಗೆ ಮುಮ್ತಾಜ್ ಅವರ ಮೃತದೇಹ ಕೂಳೂರು ಸೇತುವೆಯ ಕೆಲವೇ ಮೀಟರ್ ದೂರದಲ್ಲಿ ಪತ್ತೆಯಾಯಿತು. ಬಳಿಕ ಮೃತದೇಹವನ್ನು ಎಜೆ ಆಸ್ಪತ್ರೆಗೆ ಕೊಂಡೊಯ್ದು, ಪೋಸ್ಟ್ ಮಾಟರ್ಂ ಮತ್ತಿತರ ಪ್ರಕ್ರಿಯೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಕೃಷ್ಣಾಪುರದ ಅವರ ಮನೆಯಲ್ಲಿ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದ್ದು, ನೂರಾರು ಮಂದಿ ಭಾಗವಹಿಸಿದ್ದರು. ಸಂಜೆ ವೇಳೆಗೆ ಕೃಷ್ಣಾಪುರ ಈದ್ಗಾ ಮಸೀದಿಯಲ್ಲಿ ಸರ್ವ ಮುಖಂಡರು, ಸಾರ್ವಜನಿಕರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಬಿಎಂಡಬ್ಲ್ಯೂ ಕಾರು ಖಾಸಗಿ ಬಸ್ಸಿಗೆ ಡಿಕ್ಕಿ :

ಸೋಮವಾರ ಬೆಳಗ್ಗೆ 3.10ರ ಸುಮಾರಿಗೆ ಮನೆಯಿಂದ ಹೊರಟಿದ್ದ ಮುಮ್ತಾಜ್ ಅವರ ಬಿಎಂಡಬ್ಲ್ಯೂ ಕಾರು ಕೂಳೂರಿನ ಎಂಸಿಎಂ ಬಳಿಯ ರೈಲ್ವೆ ಗೇಟ್ ಬಳಿ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಸಿಸಿಟಿವಿ ಫೂಟೇಜ್‌ಗಳ ಆಧಾರದಲ್ಲಿ ಅಪಘಾತಕ್ಕೆ ಒಳಗಾದ ಬಸ್ಸನ್ನು ಗುರುತಿಸಲಾಗಿದ್ದು, ಬಸ್ಸು ಮಾಲೀಕರು ಈ ಕುರಿತು ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಸಿದ್ದಾರೆ.

ಆರೋಪಿಗಳ ಪತ್ತೆಗೆ ಪೊಲೀಸ್ ತಂಡ ರಚನೆ :

ವಿದ್ಯಾಸಂಸ್ಥೆ ಮಾತ್ರವಲ್ಲದೆ ವಿವಿಧ ಉದ್ಯಮಗಳನ್ನು ಹೊಂದಿದ್ದ ಮುಮ್ತಾಜ್ ಅಲಿ ಸಾಮಾಜಿಕ, ರಾಜಕೀಯವಾಗಿ ಪ್ರಭಾವಿ ವ್ಯಕ್ತಿಯಾಗಿದ್ದರು. ಪ್ರಥಮ ಆರೋಪಿ ಆಯಿಷಾ ರೆಹಮತ್, ಇತರರ ಜತೆ ಸೇರಿ ವ್ಯವಸ್ಥಿತವಾಗಿ ಹನಿಟ್ರಾಪ್ ನಡೆಸಿದ್ದೇ ಮುಮ್ತಾಜ್ ಸಾವಿಗೆ ಕಾರಣ. ಆರೋಪಿಗಳ ಪತ್ತೆಗೆ ಪೊಲೀಸ್ ತಂಡಗಳು ಕಾರ್ಯಾಚರಣೆ ಆರಂಭಿಸಿವೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಭಾನುವಾರ ಬೆಳಗ್ಗೆ ಸುಮಾರು 3 ಗಂಟೆ ವೇಳೆಗೆ ಮುಮ್ತಾಜ್ ಅವರು ಕೃತ್ಯಕ್ಕೆ ಕಾರಣರಾದ ವ್ಯಕ್ತಿಗಳನ್ನು ಹೆಸರಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕುಟುಂಬ ಸದಸ್ಯರು ಮತ್ತು ಸ್ನೇಹಿತರಿಗೆ ಆಡಿಯೊ ಸಂದೇಶ ಕಳುಹಿಸಿದ್ದರು. ಈ ಕುರಿತಾಗಿಯೂ ತನಿಖೆ ಮುಂದುವರಿದಿದೆ. ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.