Friday, November 15, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಾಣೆಮಂಗಳೂರು ಸೇತುವೆಯಲ್ಲಿ ತಾಂತ್ರಿಕ ದೋಷದಿಂದ ಕೆಟ್ಟು ನಿಂತ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ : ಅರ್ಧ ತಾಸಿಗಿಂತಲೂ ಹೆಚ್ಚು ಹೊತ್ತು ಉಂಟಾದ ಟ್ರಾಫಿಕ್ ಜಾಮ್ – ಕಹಳೆನ್ಯೂಸ್

ಬಂಟ್ವಾಳ: ತಾಂತ್ರಿಕ ದೋಷದಿಂದ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿಯೊಂದು ಪಾಣೆಮಂಗಳೂರು ಸೇತುವೆಯಲ್ಲಿ ಕೆಟ್ಟು ನಿಂತ ಪರಿಣಾಮ ಸುಮಾರು ಅರ್ಧ ತಾಸಿಗಿಂತಲೂ ಹೆಚ್ಚು ಹೊತ್ತು ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿ ಪ್ರಯಾಣಿಕರು ಪರದಾಡುವ ಸ್ಥಿತಿ ಉಂಟಾದ ಘಟನೆ ನಡೆಯಿತು.

ಮಂಗಳೂರು ಕಡೆಯಿಂದ ಬೆಂಗಳೂರು ಕಡೆಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರ ಮಾಡುತ್ತಿದ್ದ ಈ ಲಾರಿ ಬಿಸಿರೋಡಿನ ಪಾಣೆಮಂಗಳೂರು ನೇತ್ರಾವತಿ ಸೇತುವೆಯ ಮಧ್ಯ ಭಾಗದಲ್ಲಿ ಕೆಟ್ಟು ನಿಂತಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಜೆ ಸುಮಾರು 6.30 ಗಂಟೆಗೆ ಲಾರಿ ಕೆಟ್ಟು ನಿಂತ ಪರಿಣಾಮ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಶಾಲೆಗೆ ದಸರಾ ರಜೆಯ ಪ್ರಯುಕ್ತ ಮತ್ತು ನವರಾತ್ರಿ ಹಬ್ಬದ ಸಂದರ್ಭದಲ್ಲಿ ವಾಹನಗಳಲ್ಲಿ ಓಡಾಟ ಮಾಡುವ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಳವಾಗಿದ್ದು, ಇವತ್ತು ಅರ್ಧ ತಾಸಿನಲ್ಲಿ ಕಿಲೋಮೀಟರ್ ದೂರದವರೆಗೆ ವಾಹನಗಳು ಸಾಲು ಗಟ್ಟಿ ನಿಂತಿದ್ದವು.

ಜಾಹೀರಾತು
ಜಾಹೀರಾತು
ಜಾಹೀರಾತು

ರಾತ್ರಿ ವೇಳೆ ಆಗಿದ್ದರಿಂದ ಹೆಚ್ಚಿನವರು ಮನೆಗೆ ಹೋಗುವ ತವಕದಲ್ಲಿದ್ದು, ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರು ಕೆಟ್ಟು ನಿಂತ ವಾಹನಕ್ಕೆ ಹಿಡಿಶಾಪ ಹಾಕುತ್ತಿದ್ದದ್ದು ಕಂಡು ಬಂತು.

ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ಅವರು ವಾಹನಗಳ ಅಡ್ಡಾದಿಡ್ಡಿ ಓಡಾಟಕ್ಕೆ ಬ್ರೇಕ್ ಹಾಕಿ, ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಟ್ಟ ಬಳಿಕ ಕೆಟ್ಟು ನಿಂತ ಲಾರಿಯನ್ನು ಜೆಸಿಬಿಯ ಮೂಲಕ ತೆರವುಗೊಳಿಸಿದರು. ಟ್ರಾಪಿಕ್ ಎ.ಎಸ್.ಐ.ವಿಜಯ್ ಹಾಗೂ ಸಿಬ್ಬಂದಿಗಳು ಸ್ಥಳದಲ್ಲಿದ್ದರು.