Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ- ಕಹಳೆ ನ್ಯೂಸ್

ಹರಿಯಾಣ ವಿಧಾನಸಭೆ ಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಬಹುಮತದ ಗೆಲುವನ್ನು ಪಡೆದಿದ್ದು ಪುತ್ತೂರಿನಲ್ಲಿ ಕಾರ್ಯಕರ್ತರು ಬಿಜೆಪಿ ಕಛೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು, ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್ ಪಿಬಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್ ಗೌರಿ, ಬಿಜೆಪಿ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟ ಸಂಚಾಲಕರಾದ ಚಂದ್ರಶೇಖರ್ ರಾವ್ ಬಪ್ಪಳಿಗೆ, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ನಾಗೇಶ್ ಪ್ರಭು, ಬಿಜೆಪಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲಗಳ ಪದಾಧಿಕಾರಿಗಳು , ನಿಕಟ ಪೂರ್ವ ಪದಾಧಿಕಾರಿಗಳು , ವಿವಿಧ ಮೋರ್ಛಗಳ ಹಾಗೂ ಮಹಾಶಕ್ತಿಕೇಂದ್ರಗಳ ಪದಾಧಿಕಾರಿಗಳು , ಸೇರಿದಂತೆ ಬಿಜೆಪಿಯ ಹಿರಿಯ , ಕಿರಿಯ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು