Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ ಹಾಗೂ ವಾಹನಪೂಜೆ- ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಗಣಹೋಮ, ಶ್ರೀ ಶಾರದಾ ಪೂಜೆ ಹಾಗೂ ಆಯುಧಪೂಜೆ ಪ್ರಯುಕ್ತ ವಾಹನ ಪೂಜೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನಡೆಯಿತು.

ವೇ.ಮೂ.ದೇವರಥ ಭಟ್ಟ ಹಾಗೂ ವೇ.ಮೂ.ವಾಸುದೇವ ಭಟ್ಟರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ಸಂಯೋಜನೆಗೊಂಡಿತು.ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಟ್ರಸ್ಟಿಗಳಾದ ವೈದೇಹಿ ನಟ್ಟೋಜ, ಶ್ರೀಕೃಷ್ಣ ನಟ್ಟೋಜ, ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ ಕೆ, ಆಡಳಿತಾಧಿಕಾರಿ ಗಣೇಶ ಪ್ರಸಾದ್ ಎ, ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ, ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯೆ ಸುಚಿತ್ರಾ ಪ್ರಭು, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಎಂ, ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ ಬೋಧಕ ಬೋಧಕೇತರ ವೃಂದ, ವಿದ್ಯಾರ್ಥಿಗಳು ಹಾಗೂ ಹೆತ್ತವರು ಹಾಜರಿದ್ದರು. ಇದಕ್ಕೂ ಮೊದಲಿಗೆ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶ್ರೀ ಶಾರದಾಪೂಜೆ ಆಯೋಜನೆಗೊಂಡಿತು.
ಆಯುಧಪೂಜೆಯ ಪ್ರಯುಕ್ತ ಅಂಬಿಕಾ ಪರಿವಾರಕ್ಕೆ ಸೇರಿದ ಹಲವಾರು ವಾಹನಗಳಿಗೆ ಆಯುಧಪೂಜೆ ಪ್ರಯುಕ್ತ ವಾಹನಪೂಜೆ ನೆರವೇರಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು