ಮುಂಬೈ: ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಆದಂತಹ ಟಾಟಾ ಸಂಸ್ಥೆಯ ಸಂಸ್ಥಾಪಕ ರತನ್ ಟಾಟಾ ರವರು ಬುಧವಾರ ರಾತ್ರಿ ನಿಧನರಾಗಿದ್ದಾರೆ. ರತನ್ ಟಾಟಾ ಅವರು ತಮ್ಮ ವೃದ್ದಾಪ್ಯ ಸಂಬಂಧಿ ಕಾಯಿಲೆಗೆ ತುತ್ತಾಗಿ ಚಿಕಿತ್ಸೆಗೊಳ್ಳಗಾಗಿದ್ದರು.
1991ರಲ್ಲಿ ಟಾಟಾ ಸನ್ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿದ್ದ ರತನ್ ಟಾಟಾ ತಮ್ಮ ಸಂಸ್ಥೆಯನ್ನು ನೂರು ಬಿಲಿಯನ್ ಡಾಲರ್ ಮೌಲ್ಯದ ಜಾಗತಿಕ ದರ್ಜೆಯ ಸಾಮ್ರಾಜ್ಯವನ್ನಾಗಿ ವಿಸ್ತರಿಸಿದ್ದರು.
ಡಿಸೆಂಬರ್ 2012ರಲ್ಲಿ ಟಾಟಾ ಸಂಸ್ಥೆಯ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾಗಿದ್ದ ರತನ್ ಟಾಟ ನಂತರ ಗೌರವಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಭಾರತದಲ್ಲಿ ಟಾಟಾ ಕಂಪನಿಯ ಹೆಸರಿನಲ್ಲಿ ಉದ್ಯಮ ನಡೆಸುತ್ತಿದ್ದಾಗ ಇಡೀ ಜಗತ್ತೇ ತಮ್ಮ ಸಂಸ್ಥೆಯನ್ನು ತಿರುಗಿ ನೋಡುವಂತೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ ಇವರ ನಿಧನಕ್ಕೆ ದೇಶದ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.