Friday, April 11, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ-ಕಹಳೆ ನ್ಯೂಸ್

ಮಂಗಳೂರು: ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಯ ಮತದಾನ ಅ.21ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಅ.19ರ ಸಂಜೆ 4 ರಿಂದ ಅ.21 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ ಆದೇಶಿಸಿದ್ದಾರೆ.

ಮತಗಟ್ಟೆ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿ ಸಿದೆ. ಚುನಾವಣಾ ಅಭ್ಯರ್ಥಿ/ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂ ಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್‌ ಅಂಗಡಿ, ಬುಕ್‌ಸ್ಟಾಲ್‌, ಸೈಬರ್‌ ಕೆಫೆಗಳನ್ನು ನಿರ್ಬಂಧಿ ಸಿದೆ. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇ ಧಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ