Sunday, January 19, 2025
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸಂತಾಪಸುದ್ದಿ

ಆಯುಧ ಪೂಜೆ ವೇಳೆ ಹೃದಯಾಘಾತದಿಂದ ಬೆಳ್ತಂಗಡಿ ಯುವಕ ಅತ್ತಾಜೆ ಆದಿತ್ಯ ಭಟ್ ನಿಧನ – ಕಹಳೆ ನ್ಯೂಸ್

ಬೆಳ್ತಂಗಡಿ, ಅ.12: ಯುವಕನೊಬ್ಬ ಶುಕ್ರವಾರ ನಡೆದ ಆಯಧ ಪೂಜೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ ಆದಿತ್ಯ ಭಟ್ (29) ಮೃತ ದುರ್ದೈವಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದಿತ್ಯ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯ ಸ್ತಂಭನಕ್ಕೆ ಕಾರಣವಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಅವರು ಜರ್ಮನಿಯಲ್ಲಿ ಸ್ವಂತ ಸ್ಟಾರ್ಟಪ್ ನಡೆಸುತ್ತಿದ್ದರು. ಅವರು ತಂದೆ-ತಾಯಿ, ಸಹೋದರಿ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.