Friday, November 15, 2024
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮಣಿಪಾಲ ಜ್ಞಾನಸುಧಾದಲ್ಲಿ ವಿದ್ಯಾದೇವತೆ ಶಾರದಾ ಪೂಜೆಯ ಸಂಭ್ರಮ-ಕಹಳೆ ನ್ಯೂಸ್

ಮಣಿಪಾಲ : ನಾಡಿನೆಲ್ಲೆಡೆ ವಿಜಯ ದಶಮಿಯ ಸಂಭ್ರಮ ಕಳೆಗಟ್ಟಿರುವ ಸಂದರ್ಭದಲ್ಲಿ, ಅಕ್ಟೋಬರ್ 12ರಂದು ಮಣಿಪಾಲ ಜ್ಞಾನಸುಧಾ ಪದವಿ
ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಶಾರದ ಪೂಜೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಠ್ಯದ ಜೊತೆಗೆ ಸಂಸ್ಕೃತಿ -ಸಂಸ್ಕಾರಯುಕ್ತ ಶಿಕ್ಷಣದ ಅರಿವು ಮೂಡಿಸುವಂತಹ ಕಾರ್ಯದಲ್ಲಿ ನಮ್ಮನ್ನು ತೊಡಗಿಸಿಳ್ಳಬೇಕು ಎಂದು ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸೇವಾ ಭಾರತಿ ಭಜನಾ ಮಂಡಳಿ, ಸಚ್ಚೇರಿಪೇಟೆ ಮುಂಡ್ಕೂರು ತಂಡದಿAದ ಕುಣಿತ ಭಜನಾ ಸೇವೆಯು ಜರುಗಿತು.
ವಿದ್ಯಾರ್ಥಿಗಳು ಭಕ್ತಿ ಸುಧೆಯ ಗೀತ ಗಾಯನ, ಭರತನಾಟ್ಯವನ್ನು ಪ್ರಸ್ತುತ ಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಅಜೆಕಾರು ಪದ್ಮಗೋಪಾಲಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಟ್ರಸ್ಟಿ ಶ್ರೀಮತಿ ವಿದ್ಯಾವತಿ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಸಿ.ಇ.ಒ ದಿನೇಶ್ ಎಮ್ ಕೊಡವೂರು, ಕಾಲೇಜಿನ ಹಿತೈಷಿಗಳಾದ ತ್ರಿವಿಕ್ರಮ ಕಿಣಿ, ದೇವೆಂದ್ರ ನಾಯಕ್, ಪದ್ಮನಾಭ ಭಂಡಿ, ಅಜೆಕಾರುಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ನ ಪಿ.ಅರ್.ಒ ಜ್ಯೋತಿ ಪದ್ಮನಾಭ ಭಂಡಿ, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್,ಉಪಪ್ರಾAಶುಪಾಲರಾದ ಪ್ರಕಾಶ್ ಜೋಗಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಣಿಪಾಲ ಜ್ಞಾನಸುಧಾ ಮತ್ತು ಉಡುಪಿ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರು ಸಂಭ್ರಮದಿAದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಗಣಿತ ಶಾಸ್ತ್ರ ಉಪನ್ಯಾಸಕಿ ನಕ್ಷಾ ಕಲ್ಕೂರ ಕಾರ್ಯಕ್ರಮ ನಿರೂಪಿಸಿದರು.