Recent Posts

Monday, January 20, 2025
ಬೆಂಗಳೂರುಸುದ್ದಿ

“ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್​ ಬಾಸ್​” ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ಬಾಸ್​ ಗೆ ಗುಡ್​ ಬೈ ಹೇಳಿದ ಕಿಚ್ಚ ಸುದೀಪ್ ​ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ಬಾಸ್​ ನಿರೂಪಕನ  ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ನಟ ಕಿಚ್ಚ ಸುದೀಪ್​  ಅವರು ಹೇಳಿದ್ದಾರೆ. 11 ಆವೃತ್ತಿಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದ ಕಿಚ್ಚ ಸುದೀಪ್ ಅವರು ಇದೀಗ ಕಾರ್ಯಕ್ರಮವನ್ನು ತೊರೆಯುವ ನಿರ್ಧಾರಕ್ಕೆ ಬಂದಿದ್ದು, ಈ ವಿಚಾರ ಅಭಿಮಾನಿಗಳಿಗೆ  ಬೇಸರವನ್ನುಂಟು ಮಾಡಿದೆ.


ಈ ಕುರಿತು ಸುದೀಪ್​  ಟ್ವೀಟ್​   ಮಾಡಿದ್ದು, ಬಿಗ್ ಬಾಸ್   ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್​ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿ ಪ್ರೀತಿ ಏನೆಂಬುದು ತಿಳಿಯುತ್ತದೆ. ಈ 10 ಪ್ಲಸ್​ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್​ ಬಾಸ್​ . ಇಷ್ಟು ವರ್ಷಗಳ ಕಾಲ ಬಿಗ್​ ಬಾಸ್​  ಕಾರ್ಯಕ್ರಮವನ್ನು ನೋಡಿ ನೀವು ಮತ್ತು ಕಲರ್ಸ್​ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇನೆ. ಈ ನಿರ್ಧಾರ ಅತ್ಯುತ್ತಮ ಆಗುವಂತೆ ಮಾಡೋಣ. ನಿಮ್ಮೆಲ್ಲರನ್ನೂ ನಿಮ್ಮನ್ನು ಮನರಂಜಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಕಿಚ್ಚ ಸುದೀಪ್​ ಅವರಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿದ್ದು, ಇವುಗಳ ಚಿತ್ರೀಕರಣ ಬಾಕಿ ಉಳಿದಿವೆ, ಈ ಕಾರಣಕ್ಕಾಗಿಯೇ ಅವರು ಶೋ ತೊರೆಯುವ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗಿದೆ. ಆದರೆ, ಅಂತಿಮವಾಗಿ ಕಿಚ್ಚ ಸುದೀಪ್​ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಬೇಕಿದೆ. 11ನೇ ಆವೃತ್ತಿ ಆರಂಭವಾಗುವುದಕ್ಕೂ ಮುನ್ನ ನಟ ಕಿಚ್ಚ ಸುದೀಪ್   ಈ ಬಾರಿ ಬಿಗ್​ಬಾಸ್​ ನಿರೂಪಣೆ ಮಾಡುವುದಿಲ್ಲ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡಿತ್ತು. ಆದರೆ, ನಂತರ ನಡೆದ ಬೆಳವಣಿಗೆಯಲ್ಲಿ ಅವರು ನಿರೂಪಣೆ  ಮಾಡಲು ಒಪ್ಪಿದ್ದರು. ಇದೀಗ ಕಾರ್ಯಕ್ರಮವನ್ನು ತೊರೆಯುವ ನಿರ್ಧಾರವನ್ನು ಸ್ವತಃ ಸುದೀಪ್​ ಅವರೇ ಹೇಳಿದ್ದು, ವೀಕ್ಷಕರು ಕಮೆಂಟ್​ ಮೂಲಕ ಬೇಸರವನ್ನು ಹೊರಹಾಕುತ್ತಿದ್ದಾರೆ.

ಭರಪೂರ ಮನರಂಜನೆಯ ಜೊತೆಗೆ ವಿವಾದಗಳನ್ನು ಹುಟ್ಟು ಹಾಕುವ ಬಿಗ್​ಬಾಸ್ , ಕಿರುತೆರೆ ಲೋಕದ ಜನಪ್ರಿಯ ಶೋಗಳಲ್ಲಿ ಒಂದೆಂದರೆ ತಪ್ಪಾಗಲಾರದು. ಪ್ರೀತಿ, ಸ್ನೇಹ ಸಂಬಂಧಗಳಿಗೆ ಈ ಶೋ ಬೆಸುಗೆಯಾಗುತ್ತದೆ. ಇಲ್ಲಿ ನಗು, ಕಣ್ಣೀರು, ಕೋಪ, ಮುನಿಸು ಮತ್ತು ಮನಸ್ತಾಪಗಳ ಮಿಶ್ರಣವು ಇದೆ. ಟಾಸ್ಕ್​ ನೀಡುವುದರ ಜೊತೆಗೆ ಜೀವನದ ಪಾಠವನ್ನು ಹೇಳಲಾಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ವಾರದ ಕೊನೆಯಲ್ಲಿ ನಟ ಕಿಚ್ಚ ಸುದೀಪ್​ ಸರಿ-ತಪ್ಪುಗಳ ತಿದ್ದುವಿಕೆ ಶೋಗೆ ಹೊಸ ಆಯಾಮವನ್ನು ತಂದುಕೊಡುತ್ತದೆ. ಈ ಎಲ್ಲ ಕಾರಣಗಳಿಂದ ಈ ಶೋ ವಿಶೇಷ ಎನಿಸಿಕೊಂಡಿದ್ದು, ಕಿರುತೆರೆ ಲೋಕದಲ್ಲಿ ಸಿಕ್ಕಾಪಟ್ಟೆ ಪಾಪ್ಯೂಲರ್​ ಆಗಿದೆ ಎಂದರೆ ತಪ್ಪಾಗಲಾರದು.