Recent Posts

Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿರೋಡಿನ ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಬೇಟಿ ನೀಡಿದ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾಶಿವರಾಜ್ ಕುಮಾರ್ – ಕಹಳೆ ನ್ಯೂಸ್

ಬಂಟ್ವಾಳ: ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾಶಿವರಾಜ್ ಕುಮಾರ್ ಅವರು ಇಂದು ಬೆಳಿಗ್ಗೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಬೇಟಿ ನೀಡಿದ್ದಾರೆ.

Geetha Pictures  ಬ್ಯಾನರ್ ನಡಿಯಲ್ಲಿ ಗೀತಾಶಿವರಾಜ್ ಕುಮಾರ್ ಅವರ ನಿರ್ಮಾಣದ ಖ್ಯಾತ ನಟ ಶಿವರಾಜ್ ಕುಮಾರ್ ಅಭಿನಯದ ಹೊಸ ಚಲನಚಿತ್ರ “ಬೈರತಿ ರಣಗಲ್ ” ನ.15 ರಂದು ಕರ್ನಾಟಕ ರಾಜ್ಯದ್ಯಾಂತ ಏಕಕಾಲದಲ್ಲಿ ಬಿಡುಗಡೆಯಾಗಲಿದ್ದು, ಚಿತ್ರ ಯಶಸ್ವಿಯಾಗಬೇಕು ಎಂಬ ಸಂಕಲ್ಪದಿಂದ ಇಲ್ಲಿನ ವನದುರ್ಗೆ ದೇವಿಗೆ ಪತಿ ಪತ್ನಿ ಸಮೇತ ವಿಶೇಷ ಪೂಜೆ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವನದುರ್ಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಇವರು ಅನ್ನಪ್ರಸಾದ ಸ್ವೀಕರಿಸಿ ಬಳಿಕ ಕುತ್ತಾರು ಕೊರಗಜ್ಜ ದೈವದ ಆದಿಸ್ಥಳಕ್ಕೆ ಬೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ” ಭೈರತಿರಣಗಲ್” ಚಿತ್ರ ಕನ್ನಡ,ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ಪಂಚ ಭಾμÉಯಲ್ಲಿ ಪ್ರದರ್ಶನವಾಗಲಿದ್ದು, ನ.15 ಚಲನಚಿತ್ರ ತೆರೆಕಾಣಲಿದೆ.ಈಗಾಗಲೇ ಚಿತ್ರದ ಆಡಿಯೋ ರಿಲೀಸ್ ಆಗಿದ್ದು,ಇದೇ ತಿಂಗಳ ಅ.20 ರಂದು ಟೀಸರ್ ಬಿಡುಗಡೆಯಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರ ಜೊತೆ ಚಲನ ಚಿತ್ರ ನಿರ್ಮಾಪಕರುಗಳಾದ ಕೆ.ಪಿ.ಶ್ರೀನಾಥ್, ರಾಜೇಶ್ ಭಟ್, ಕೀರ್ತನ್ ಪೂಜಾರಿ, ಶಿವರಾಜ್ ಕುಮಾರ್ ಅವರ ಸಂಬಂಧಿ ನಟರಾಜ್ , ಸ್ನೇಹಿತರಾದ ವಿಜಯಪ್ರಸಾದ್, ಶೇಖರ್, ವನದುರ್ಗೆ ದೇವಸ್ಥಾನದ ಆಡಳಿತ ಮೊಕ್ತೇಸರ ಪಾಂಡುರಂಗ ಪ್ರಭು, ಕೊರಗಜ್ಜ ಕ್ಷೇತ್ರದ ಆಡಳಿತ ಮೊಕ್ತೇಸರ ಪ್ರೀತಮ್ ಶೆಟ್ಟಿ, ಗಾಯಕ ಜಿತೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.