Recent Posts

Monday, January 20, 2025
ಬೆಂಗಳೂರುಸುದ್ದಿ

ಎಲ್ಲ ವಿವಾದಗಳಿಗೆ ತೆರೆ ಎಳೆದ ಸುದೀಪ್ : ಕಿಚ್ಚನಿಂದ ಮತ್ತೊಂದು ಟ್ವೀಟ್ -ಕಹಳೆ ನ್ಯೂಸ್

ಸೀಸನ್ 11  ಶುರುವಾದಾಗಿನಿಂದ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಸ್ವರ್ಗ ಮತ್ತು ನರಕ ಎಂಬ ವಿಶೇಷ ಕಾನ್ಸೆಪ್ಟ್​ನೊಂದಿಗೆ ಶುರುವಾದ ಶೋ ಬಗ್ಗೆ ಇತ್ತೀಚೆಗಷ್ಟೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಹೋಗಿತ್ತು.

ಬಳಿಕ ಕಳೆದ ವೀಕೆಂಡ್​ನಲ್ಲಿ ಸುದೀಪ್ ಅವರು ಇದು ನನ್ನ ಕೊನೆಯ ಬಿಗ್ ಬಾಸ್ ಸೀಸನ್. ಇನ್ಮುಂದೆ ಶೋ ನಡೆಸಿಕೊಡುವುದಿಲ್ಲ ಎಂದು ಟ್ವೀಟ್ ಮಾಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಫೇಸ್​ಬುಕ್ ಲೈವ್ ಬಂದು, ‘ಬಿಗ್ ಬಾಸ್ ಶೋನಲ್ಲಿ ಕನ್ನಡ ಬಳಕೆ ಹೆಚ್ಚು ಆಗುತ್ತಿಲ್ಲ. ಈ ಬಾರಿಯ ಸ್ಪರ್ಧಿಗಳಿಗೆ ತುಂಬಾ ಕನ್‌ಫ್ಯೂಶನ್ ಆಗುತ್ತಿದೆ. ಬರೆದಿರುವ ಪಾಯಿಂಟ್ಸ್‌ ಸರಿಯಾಗಿ ಇಲ್ಲ. ಸರಿಯಾಗಿ ಕಮ್ಯೂನಿಕೇಟ್ ಮಾಡದೆ ಗೊಂದಲ ಆಗುತ್ತಿದೆ. ಈ ತರಹದ ಬೆಳವಣಿಗೆಯಿಂದ ಅಸಮಾಧಾನಗೊಂಡು ಸುದೀಪ್ ಬಿಡಲು ನಿರ್ಧಾರ ಮಾಡಿದ್ದಾರೆ,’ ಎಂದು ಹೇಳಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಸುದೀಪ್ ಹಾಗೂ ಕಲರ್ಸ್ ನಡುವೆ ಎಲ್ಲವೂ ಸರಿಯಿಲ್ಲ, ಬಿಗ್ ಬಾಸ್ ಆಯೋಜಕರ ಜೊತೆ ಕಿರಿಕ್ ಆಗಿದೆ ಎಂಬ ಸುದ್ದಿ ಹರಿದಾಡಿತ್ತು. ಆದರೆ, ಇದೀಗ ಸುದೀಪ್ ಟ್ವೀಟ್ ಮಾಡುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಸುದೀಪ್ ಟ್ವೀಟ್​ನಲ್ಲಿ ಏನಿದೆ?:

”ನನ್ನ ಒಂದು ಟ್ವೀಟ್​ಗೆ ನೀವು ಸಂಬಂಧಿಸಿ ಬರುತ್ತಿರುವ ಎಲ್ಲಾ ಸಪೋರ್ಟ್​ಗೆ ಅಭಿನಂದನೆ. ಆದರೆ ನನ್ನ ಹಾಗೂ ಚಾನೆಲ್​ ನಡುವೆ ಏನೋ ಸಂಘರ್ಷವಾಗಿದೆ ಎಂದು ಹರಿದಾಡುತ್ತಿರುವ ವಿಡಿಯೋ ಹಾಗೂ ಪ್ರತಿಕ್ರಿಯೆಗಳನ್ನು ಸೃಷ್ಟಿಸುತ್ತಿರುವವರಿಗೆ ನಾನು ಕೇಳಿಕೊಳ್ಳುವುದು ಇಷ್ಟೆ. ನಾವು ಒಂದು ದೀರ್ಘವಾದ ಹಾಗೂ ಧನಾತ್ಮಕ ಪ್ರಯಾಣವೊಂದನ್ನು ಮಾಡಿದ್ದೇವೆ. ಇದರಲ್ಲಿ ಒಬ್ಬರಿಗೊಬ್ಬರು ಅಗೌರವದಿಂದ ನಡೆದುಕೊಳ್ಳುವ ಪ್ರಶ್ನೆಯೇ ಹುಟ್ಟುವುದಿಲ್ಲ. ಇದರ ಸುತ್ತ ಹುಟ್ಟುತ್ತಿರುವ ಊಹೆಗಳು ಸುಳ್ಳುಗಳಿಂದ ಕೂಡಿವೆ ಮತ್ತು ಮಾಹಿತಿ ಕೊರತೆಯಿಂದ ಕೂಡಿವೆ. ನನ್ನ ಒಂದು ಟ್ವೀಟ್ ಅತ್ಯಂತ ಪ್ರಾಮಾಣಿಕವಾಗಿದೆ. ನನ್ನ ಮತ್ತು ಕಲರ್ಸ್ ಕನ್ನಡದ ನಡುವಿನ ಸಂಬಂಧ ಒಂದು ಅದ್ಭುತವಾದದ್ದು. ಅವರು ನನ್ನನ್ನು ತುಂಬಾ ಗೌರವದಿಂದ ನಡೆಸಿಕೊಂಡಿಂದ್ದಾರೆ. ಡೈರೆಕ್ಟರ್ ಪ್ರಕಾಶ್ ಒಬ್ಬ ಅದ್ಭುತ ಪ್ರತಿಭೆ ಹೊಂದಿರುವ ವ್ಯಕ್ತಿ. ಅವರ ಬಗ್ಗೆ ನನಗೆ ತುಂಬಾ ಗೌರವವಿದೆ. ನನ್ನೊಂದಿಗೆ ಕೆಲಸ ಮಾಡಿದವರು ಯಾವುದೋ ಅಪವಾದವನ್ನು ಎದುರಿಸುತ್ತಿರುವಾಗ ನಾನು ಹಿಂದೆ ಕುಳಿತುಕೊಂಡು ನೋಡುತ್ತಾ ಸಂಭ್ರಮಿಸುವವರ ಪಟ್ಟಿಗೆ ಸೇರಿದ ವ್ಯಕ್ತಿ ನಾನಲ್ಲ. ಚಿಯರ್ಸ್ & ಲವ್” ಎಂದು ಕಿಚ್ಚ ಟ್ವೀಟ್ ಮಾಡಿದ್ದಾರೆ.