Monday, January 20, 2025
ರಾಜಕೀಯಸುದ್ದಿ

ನ. 25 ರೊಳಗೆ ಸಂಪುಟ ವಿಸ್ತರಣೆ ಆಗಲೇಬೇಕು: ಹೆಚ್.ಡಿ. ದೇವೆಗೌಡ – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಗೆ ಉಭಯ ಪಕ್ಷಗಳ ನಾಯಕರು ಮುಂದಾಗಿದ್ದು, ಈ ಬಾರಿ ಯಾವುದೇ ಕಾರಣಕ್ಕೂ ಸಂಪುಟ ವಿಸ್ತರಣೆ ವಿಳಂಬ ಆಗಬಾರದು ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಸೂಚಿಸಿದ್ದಾರೆ ಎನ್ನಲಾಗಿದೆ.

ರಾಜ್ಯ ಕಾಂಗ್ರೆಸ್ ಚುನಾವಣೆ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರಿಗೆ ಖಡಕ್ ಸೂಚನೆ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಇದೇ ತಿಂಗಳ 25 ರೊಳಗೆ ಸಂಪುಟ ವಿಸ್ತರಣೆ ಆಗಲೇಬೇಕು ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಾರಿ ಯಾವುದೇ ಕಾರಣಕ್ಕೂ ವಿಳಂಬ ಮಾಡುವುದು ಬೇಡ. ನಿಗಮ ಮಂಡಳಿ ನೇಮಕಾತಿ ಸೇರಿದಂತೆ ಉಳಿದ ಸಂಪುಟ ವಿಸ್ತರಣೆಯೂ ಮಾಡಬೇಕೆಂಬುದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ದೇವೇಗೌಡರ ಮಾತಿಗೆ ಒಪ್ಪಿಗೆ ನೀಡಿರುವ ಕೆ.ಸಿ.ವೇಣುಗೋಪಾಲ್ ಎರಡು ದಿನಗಳ ಕಾಲ ಬಹ್ರೇನ್ ಗೆ ಹೋಗಲಿದ್ದಾರೆ. ಇದೇ ತಿಂಗಳ 12 ರಂದು ಸ್ವದೇಶಕ್ಕೆ ವಾಪಸ್ಸಾಗಲಿದ್ದು, ಸಂಪುಟ ವಿಸ್ತರಣೆ ಕಾರ್ಯ ಪ್ರಾರಂಭವಾಗಲಿದೆ ಎನ್ನಲಾಗಿದೆ.