Sunday, January 19, 2025
ರಾಜ್ಯಸುದ್ದಿ

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ, ರಾಜ್ಯದಲ್ಲಿ ಇನ್ನೂ ಒಂದು ವಾರ ಅಬ್ಬರಿಸಲಿರುವ ಮಳೆರಾಯ..!- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್‌ ತಿಂಗಳ ಆರಂಭದಿಂದಲೂ ಭಾರೀ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳ ಕಾಲ ಸುರಿದ ಮಳೆ ಈಗ ಕೊಂಚ ಬ್ರೇಕ್‌ ಕೊಟ್ಟಿದೆ. ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಕ್ಟೋಬರ್‌ 19ರಂದು ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇದಲ್ಲದೆ ಅಕ್ಟೋಬರ್ 21 ಮತ್ತು 22ರಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಿಗೆ ಸಹ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ಕರಾವಳಿಯ ಜಿಲ್ಲೆಗಳು, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸಲಿದೆ ಎನ್ನಲಾಗಿದೆ. ಕರಾವಳಿಯ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮೈಸೂರು, ತುಮಕೂರು, ಹಾಸನ, ರಾಮನಗರ, ಕೋಲಾರ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 23ರ ವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್ 20ರಂದು ಒಂದೇ ದಿನ ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.