Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಸಿ ಎ ಫೌಂಡೇಶನ್ ವಿದ್ಯಾರ್ಥಿಗಳ ಹಾಗೂ ಪೋಷಕರ ಸಮಾಲೋಚನಾ ಸಭೆ.-ಕಹಳೆ ನ್ಯೂಸ್

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ಸಿ ಎ ಫೌಂಡೇಶನ್ ವಿದ್ಯಾರ್ಥಿಗಳ ಹಾಗೂ ಪೋಷಕರ ಸಮಾಲೋಚನಾ ಸಭೆಯು ನಡೆಯಿತು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರು ಹಾಗೂ ವಿವೇಕಾನಂದ ಇನ್ಸ್ಟಿಟ್ಯೂಟ್ ಫಾರ್ ಸಿ ಎ ಸ್ಟಡೀಸ್ ಇದರ ಸಂಯೋಜಕರಾದ ದೇವಿಪ್ರಸಾದ್ ಇವರು ವಿದ್ಯಾರ್ಥಿಗಳಿಗೆ ಸಿ ಎ ಫೌಂಡೇಶನ್ ಕೋರ್ಸ್ ಬಗ್ಗೆ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಶೈಕ್ಷಣಿಕ ಸಂಯೋಜಕರಾದ ಶ್ರೀವತ್ಸ ಎನ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆಗಳನ್ನಿತ್ತು ಸಹಕರಿಸಿದರು. ಸಭೆಯಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಸಿ ಎ ಆಕಾಂಕ್ಷಿ ವಿದ್ಯಾರ್ಥಿಗಳು ಅವರ ಪೋಷಕರೊಂದಿಗೆ ಭಾಗಿಯಾದರು.

ಜಾಹೀರಾತು

ಜಾಹೀರಾತು
ಜಾಹೀರಾತು