ಬಂಟ್ವಾಳ: ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಹೃದಯಸ್ತಂಭನವಾಗಿ ಜೊತೆ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಬಂಟ್ವಾಳದಲ್ಲಿ 1957, ಅಕ್ಟೋಬರ್ 12ರಂದು ಬಂಟ್ವಾಳ ಗಣಪತಿ ಆಚಾರ್ಯ, ಭವಾನಿ ಅಮ್ಮ ಅವರ ಪುತ್ರರಾಗಿ ಜನಿಸಿದ ಜಯರಾಮ ಆಚಾರ್ಯರು, ಬಂಟ್ವಾಳ ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಬೋರ್ಡ್ ಶಾಲೆ)ಯಲ್ಲಿ ವಿದ್ಯಾಭ್ಯಾಸ ನಡೆಸಿ, ತಂದೆಯವರ ಪ್ರೇರಣೆಯಿಂದ ಅಮ್ಮಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿ ವೇಷವನ್ನೂ ಮಾಡಿದ್ದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುತ್ತಿದ್ದ `ಲಲಿತ ಕಲಾ ಕೇಂದ್ರ’ಕ್ಕೆ ಸೇರಿ ಯಕ್ಷಗಾನ ಹೆಜ್ಜೆಗಾರಿಕೆ ಕಲಿತರು. ಅದಾದ ಬಳಿಕ ಕಟೀಲು ಮೇಳದಲ್ಲಿ 4 ವರ್ಷ, ಪುತ್ತೂರು ಮೇಳ, ಕದ್ರಿ ಮೇಳ, ಕುಂಬಳೆ ಮೇಳದಲ್ಲಿ ತಿರುಗಾಟ ನಡೆಸಿದರು.ಮತ್ತೆ ಕಟೀಲು ಮೇಳ, ಎಡನೀರು ಮೇಳ, ಹೊಸನಗರ ಮೇಳ, ಬಳಿಕ ಹನುಮಗಿರಿ ಮೇಳ ಹೀಗೆ ಅನೇಕ ಮೇಳದಲ್ಲಿ ಕಲಾ ವ್ಯವಸಾಯ ಮಾಡಿದ್ದಾರೆ.
You Might Also Like
ಶ್ರೀ ಎಡನೀರು ಮಠಕ್ಕೆ ನ.17ರಂದು ಕಾಮಕೋಟಿ ಪೀಠಾಧೀಶ್ವರ ಜಗದ್ಗುರು ಶಂಕರಾಚಾರ್ಯ ಪೂಜ್ಯ ಶ್ರೀ ಶ್ರೀ ಶಂಕರ ವಿಜಯೇಂದ್ರ ಸರಸ್ವತೀ ಮಹಾಸ್ವಾಮಿ ಆಗಮನ – ಕಹಳೆ ನ್ಯೂಸ್
ಕಾಸರಗೋಡು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ ಶ್ರೀ ಎಡನೀರು ಮಠಕ್ಕೆ ನ.17ರಂದು ಕಾಮಕೋಟಿ ಪೀಠಾಧೀಶ್ವರ ಜಗದ್ಗುರು ಶಂಕರಾಚಾರ್ಯ ಪೂಜ್ಯ ಶ್ರೀ ಶ್ರೀ ಶಂಕರ ವಿಜಯೇಂದ್ರ ಸರಸ್ವತೀ...
ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಗ್ರಂಥಾಲಯ ಸಪ್ತಾಹ ಮತ್ತು ಪುಸ್ತಕ ಪ್ರದರ್ಶನ ಉದ್ಘಾಟನೆ-ಕಹಳೆ ನ್ಯೂಸ್
ಪುತ್ತೂರು: (ನವೆಂಬರ್ 14): “ಪುಸ್ತಕಗಳು ಮತ್ತು ಓದು ಜೀವನದ ಅವಿಭಾಜ್ಯ ಅಂಗ. ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿರುವ ಪುಸ್ತಕಗಳನ್ನು ಓದುವ ಅಭ್ಯಾಸವನ್ನು ರೂಢಿಸಿಕೊಳ್ಳುವ ಮೂಲಕ ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ಅದರಲ್ಲೂ...
ನ.17 ಮತ್ತು ನ.18ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ಸವ ರಜತ ಮಹೋತ್ಸವ – ಕಹಳೆ ನ್ಯೂಸ್
ಉಡುಪಿ : ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮವು ನ.17 ಮತ್ತು ನ.18 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ. ಈ...
ಬೆಳೆ ಕಟಾವು ವೈಜ್ಞಾನಿಕವಾಗಿ ನಡೆಯಬೇಕು ತಹಶಿಲ್ದಾರ್ ಡಾ.ಪ್ರತಿಭಾ ಆರ್-ಕಹಳೆ ನ್ಯೂಸ್
ಇಂದು ತಹಶಿಲ್ದಾರ್ ಪ್ರತಿಭಾ ಆರ್ ನೇತೃತ್ವದಲ್ಲಿ ಮೂಡಬೆಟ್ಟು ಗ್ರಾಮದ ವ್ಯಾಪ್ತಿಯಲ್ಲಿ ಭತ್ತದ ಬೆಳೆ ಕಟಾವು ನಡೆಯಿತು. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಭಾರತ ಸರ್ಕಾರದ ರಾಷ್ಟ್ರೀಯ ಮಾದರಿ...