ವಿದ್ಯಾಭಾರತಿ ಈಜು ಸ್ಪರ್ಧೆ: ಅಂಬಿಕಾದ ವಿದ್ಯಾರ್ಥಿಗಳಿಗೆ ಹಲವು ಚಿನ್ನದ ಪದಕಗಳು – ಕಹಳೆ ನ್ಯೂಸ್
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ಮಧ್ಯ ಪ್ರದೇಶದ ಮನ್ಸೂರ್ ಸರಸ್ವತಿ ಸೈನಿಕ ಶಾಲೆಯಲ್ಲಿ ನಡೆದ ವಿದ್ಯಾಭಾರತಿ 19 ವರ್ಷ ವಯೋಮಾನದ ಒಳಗಿನವರ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆಗೈದಿರುತ್ತಾರೆ.
ಪ್ರಥಮ ಪಿಯುಸಿ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ, ಪುತ್ತೂರಿನ ಎಂ ನರಸಿಂಹ ಶೆಣೈ ಮತ್ತು ಶ್ರೀಲಕ್ಷ್ಮಿ ಎನ್ ಶೆಣೈ ದಂಪತಿ ಪುತ್ರಿ ಪ್ರತೀಕ್ಷಾ ಶೆಣೈ 50 ಮೀಟರ್ ಬ್ರೆಸ್ಟ್ ಸ್ಟ್ರೋಕ್, 100 ಮೀಟರ್ ಬ್ರೆಸ್ಟ್ ಸ್ಟ್ರೋಕ್, 200 ಮೀಟರ್ ಬ್ರೆಸ್ಟ್ ಸ್ಟ್ರೋಕ್‍ನಲ್ಲಿ ಪ್ರಥಮ ಸ್ಥಾನ ಪಡೆದು ಒಟ್ಟು 3 ಚಿನ್ನದ ಪದಕಗಳನ್ನು ಗೆದ್ದುಕೊಂಡಿರುತ್ತಾರೆ.
ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿ ಪುತ್ತೂರು ದರ್ಬೆಯ ನಳಿನಾಕ್ಷ ಎನ್ ಮತ್ತು ಗಾಯತ್ರಿ ಪಿ ದಂಪತಿ ಪುತ್ರ ಅನಿಕೇತ್ 100 ಮೀಟರ್ ಬ್ಯಾಕ್ ಸ್ಟ್ರೋಕ್, 200 ಮೀಟರ್ ಬ್ಯಾಕ್ ಸ್ಟ್ರೋಕ್, 200 ಮೀಟರ್ ಇಂಡಿವಿಜುವಲ್ ಮಿಡ್ಲೇ, 4*100 ಫ್ರೀ ಸ್ಟೈಲ್ ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದು ಒಟ್ಟು 4 ಚಿನ್ನದ ಪದಕಗಳನ್ನು ಬಾಚಿಕೊಂಡಿರುತ್ತಾರೆ.
ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿ ಪುತ್ತೂರು ದರ್ಬೆಯ ಶ್ರೀ ಕೇಶವಕುಮಾರ್. ಕೆ. ಎಂ ಹಾಗೂ ಮೀನಾಕ್ಷಿ ದಂಪತಿಯ ಪುತ್ರ ಧನ್ವಿತ್ 50 ಮೀಟರ್, 100 ಮೀಟರ್, 200 ಮೀಟರ್ ಫ್ರೀ ಸ್ಟೈಲ್, 4*100 ಫ್ರೀ ಸ್ಟೈಲ್ ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದು ಒಟ್ಟು 4 ಚಿನ್ನದ ಪದಕಗಳನ್ನು ಗೆದ್ದು ವಿಜಯ ಸಾಧಿಸಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪುತ್ತೂರು ಚಿಕ್ಕಮುಡ್ನೂರಿನ ರವಿಶಂಕರ್ ಡಿ ಮತ್ತು ಅನುಪಮಾ ದಂಪತಿಯ ಪುತ್ರಿ ಶ್ರದ್ಧಾಲಕ್ಷ್ಮಿ 100 ಮೀಟರ್ ಬ್ಯಾಕ್ ಸ್ಟ್ರೋಕ್‍ನಲ್ಲಿ ಪ್ರಥಮ ಸ್ಥಾನ ಪಡೆದು ಒಂದು ಚಿನ್ನದ ಪದಕ, 50 ಮೀಟರ್ ಬ್ಯಾಕ್ ಸ್ಟ್ರೋಕ್‍ನಲ್ಲಿ ದ್ವಿತೀಯ ಸ್ಥಾನ ಪಡೆದು ಒಂದು ಬೆಳ್ಳಿ ಪದಕ ಪಡೆದು ಕೀರ್ತಿ ಗಳಿಸಿರುತ್ತಾರೆ.
ಈ ಎಲ್ಲಾ ವಿದ್ಯಾರ್ಥಿಗಳು ನವೆಂಬರ್ ತಿಂಗಳಲ್ಲಿ ಗುಜರಾತ್‍ನ ರಾಜ್‍ಕೋರ್ಟ್‍ನಲ್ಲಿ ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸುವ ಸ್ಪರ್ಧೆಗೆ ಅರ್ಹತೆ ಪಡೆದಿರುತ್ತಾರೆ. ಈ ವಿದ್ಯಾರ್ಥಿಗಳು ಬಾಲವನ ಈಜು ಕೊಳದ ಈಜು ತರಬೇತುದಾರರಾದ ಪಾರ್ಥಾ ವಾರಣಾಸಿ, ರೋಹಿತ್, ದೀಕ್ಷಿತ್, ನಿರೂಪ್ ಇವರಲ್ಲಿ ತರಬೇತು ಪಡೆದಿರುತ್ತಾರೆ.