Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ.ಪೂ ಕಾಲೇಜಿಗೆ ರಾಷ್ಟ್ರ ಮಟ್ಟದ ‘ವೈಬ್ರಾನ್ಜ – 2024’ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ-ಕಹಳೆ ನ್ಯೂಸ್

ಪುತ್ತೂರು: ಸೈಂಟ್ ಆಗ್ನೆಸ್ ಕಾಲೇಜು ಇದರ ಆಶ್ರಯದಲ್ಲಿ ಅ22 ರಂದು ನಡೆದ ‘ವೈಬ್ರಾನ್ಜ – 2024’ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿರುತ್ತಾರೆ.
ದ್ವಿತೀಯ ವಿಜ್ಞಾನ ವಿಭಾಗದ ಪ್ರಾರ್ಥನಾ ಬಿ ಹಾಗೂ ಖುಷಿ ರೆಟ್ರೋ ಥೀಮ್ಡ್ ಹಾಡುಗಾರಿಕೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಕ್ರಿಯೇಟಿವ್ ಬ್ಲೂಮ್ಸ್- ಸ್ವಿಚ್ ಪೇಯಿಂಟ್ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಶರಣ್ಯ ಹಾಗೂ ಪ್ರಥಮ ವಿಜ್ಞಾನ ವಿಭಾಗದ ನಿತ್ಯ ಐ ಆರ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಕಾಲೇಜಿನ ಪ್ರಾಂಶುಪಾಲರಾದ ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ರಶ್ಮಿ ಪಿ ಎಸ್ ಹಾಗೂ ಭರತ್ ಜಿ. ಪೈ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು