ಮಂಗಳೂರು: ಸಂತ ಅಲೋಷಿಯಸ್ ಪ.ಪೂ ಕಾಲೇಜಿನಲ್ಲಿ ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಪ್ರಾರಂಭ : ಕೇಂದ್ರ ಚುನಾವಣಾ ವೀಕ್ಷಕ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತಿ – ಕಹಳೆ ನ್ಯೂಸ್
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆದ ಉಪಚುನಾವಣೆಯ ಮತಗಳ ಎಣಿಕೆ ಇಂದು ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭವಾಗಿದೆ.
ಒಂದು ಕೊಠಡಿಯಲ್ಲಿ ಮತ ಎಣಿಕೆಗೆ ವ್ಯವಸ್ಥೆ ಮಾಡಲಾಗಿದ್ದು, 12 ಮೇಜುಗಳಲ್ಲಿ ಎಣಿಕೆ ನಡೆಯುತ್ತಿದೆ. ಒಟ್ಟು 392 ಮತ ಪೆಟ್ಟಿಗೆಗಳು ಇದ್ದು, ಪ್ರತಿ ಟೇಬಲ್‌ಗೆ 33 ರಂತೆ ಪೆಟ್ಟಿಗೆಗಳನ್ನು ಹಂಚಿಕೆ ಮಾಡಲಾಗಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು ‘ಡಿ’ ಗ್ರೂಪ್ ಸಿಬ್ಬಂದಿ ಇದ್ದಾರೆ. ಮತಪೆಟ್ಟಿಗೆಗಳನ್ನು ತೆರೆದು ಒಟ್ಟು ಮತಪತ್ರಗಳ ಮಿಶ್ರಣದ ಬಳಿಕ ಎಣಿಕೆ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.
ಮತ ಎಣಿಕೆ ಸ್ಥಳದಲ್ಲಿ ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದಾರೆ.