Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ ಪೂ ಕಾಲೇಜಿನ ಪ್ರಾರ್ಥನಾ ಬಿ ಕರ್ನಾಟಕ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ-ಕಹಳೆ ನ್ಯೂಸ್

ಪುತ್ತೂರು: ಸಂಗೀತ ಪರಿಷತ್ತು ಮಂಗಳೂರು ಇದರ ಆಶ್ರಯದಲ್ಲಿ ಭಾರತೀಯ ವಿದ್ಯಾಭವನದ ಸಹಯೋಗದೊಂದಿಗೆ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಸೀನಿಯರ್ ವಿಭಾಗದ ಹಾಡುಗಾರಿಕೆ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಪ್ರಾರ್ಥನಾ ಬಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಇವರು ಪ್ರಾರಂಭದಲ್ಲಿ ವಿದುಷಿ ಡಾ. ಸುಚಿತ್ರಾ ಹೊಳ್ಳ ಅವರಲ್ಲಿ ಸಂಗೀತ ಅಭ್ಯಾಸವನ್ನು ಮಾಡಿದ್ದು, ಪ್ರಸ್ತುತ ಚೆನ್ನೈ ನ ಕಲೈಮಾಮಣಿ ಡಾ. ಎಸ್ ಸುಂದರ್ ಹಾಗೂ ವಿದುಷಿ ಜೆ ಬಿ ಕೀರ್ತನಾ ಶ್ರೀರಾಮ್ ಅವರಲ್ಲಿ ಸಂಗೀತ ಅಭ್ಯಾಸವನ್ನು ಮಾಡುತ್ತಿದ್ದು, ಪುತ್ತೂರಿನ ಪ್ರಸಿದ್ಧ ದಂತ ವೈದ್ಯರಾದ ಡಾ. ಶ್ರೀ ಪ್ರಕಾಶ್ ಬಿ ಇವರ ಹಿರಿಯ ಸುಪುತ್ರಿಯಾಗಿರುತ್ತಾರೆ.

ಕಾಲೇಜಿನ ಪ್ರಾಂಶುಪಾಲರಾದ ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ರಶ್ಮಿ ಪಿ ಎಸ್ ಹಾಗೂ ಭರತ್ ಜಿ. ಪೈ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು