Tuesday, January 21, 2025
ಉಡುಪಿಸುದ್ದಿ

ಉಡುಪಿ: ಶೈಕ್ಷಣಿಕ ಸಮ್ಮೇಳನ ಮತ್ತು ವಾರ್ಷಿಕ ಮಹಾಸಭೆ ಕಾರ್ಯಕ್ರಮ- ಕಹಳೆ ನ್ಯೂಸ್

ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳು ವಿದ್ಯಾರ್ಥಿಗಳನ್ನು ಕೈ ಬೀಸಿ ಕರೆಯುತ್ತಿವೆ, ಶಿಸ್ತು ಮತ್ತು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಪ್ರಾಂಶುಪಾಲರ ಮತ್ತು ಉಪನ್ಯಾಸಕರ ಶ್ರಮ ಬೇರೆ ಜಿಲ್ಲೆಯವರಿಗೆ ಮಾದರಿಯಾಗಿದೆ ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ ಶೆಟ್ಟಿ ಹೇಳಿದರು.
ಅವರು ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಡುಪಿಯಲ್ಲಿ ನಡೆದ ಶೈಕ್ಷಣಿಕ ಸಮ್ಮೇಳನ ಮತ್ತು ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಉಡುಪಿ ಜಿಲ್ಲಾ ಪಂಚಾಯತ್ ವತಿಯಿಂದ “ನಮ್ಮ ಶಾಲೆ” ಆಫ್ ಮೂಲಕ ವಿದ್ಯಾರ್ಥಿಗಳಿಗೆ ಪಾಠ ಪ್ರವಚನವನ್ನು ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಶ್ರಾಂತ ಉಪನಿರ್ದೇಶಕರಾದ ಆರ್ ಬಿ ನಾಯಕ ಅವರು ಮಾತನಾಡಿ ಈ ಶೈಕ್ಷಣಿಕ ಸಮ್ಮೇಳನದಲ್ಲಿ ಉಡುಪಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪಿಯುಸಿ ತನಕ ಅಧ್ಯಯನ ನಡೆಸಿ ಮಾಹೆ ಮಣಿಪಾಲದ ಪ್ರವೇಶ ಪರೀಕ್ಷೆ ಯಲ್ಲಿ 10 ಸಾವಿರದೊಳಗಿನ ರ್ಯಾಂಕ್ ಪಡೆದು ವಿವಿಧ ತಾಂತ್ರಿಕ ಶಿಕ್ಷಣ ವಿಭಾಗಕ್ಕೆ ಉಚಿತ ಸೀಟ್ ಪಡೆದ ಆರು ಜನ ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿರುವುದು ಮುಂದಿನ ವಿದ್ಯಾರ್ಥಿಗಳಿಗೆ ಪ್ರೇರಣೆ ಆಗಲಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯುವಂತಾಗಲಿ ಎಂದು ಶುಭಹಾರೈಸಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಅಧ್ಯಕ್ಷತೆ ವಹಿಸಿದ್ದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ನಿವ್ರತ್ತರಾದ ಪ್ರಾಂಶುಪಾಲರನ್ನು ಸನ್ಮಾನಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ , ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಶೇಕಡಾ 90 ಕ್ಕಿಂತ ಹೆಚ್ಚು ಫಲಿತಾಂಶ ಪಡೆದ ಕಾಲೇಜುಗಳಿಗೆ ಪ್ರಶಂಸಾ ಪತ್ರ ನೀಡಲಾಯಿತು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಪ್ರಶ್ನೆ ಪತ್ರಿಕೆ ಕಾರ್ಯಾಗಾರದಲ್ಲಿ ಪಾಲ್ಗೊಂಡ 115 ಉಪನ್ಯಾಸಕರಿಗೆ ಗೌರವ ಸಮರ್ಪಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಸ.ಪ.ಪೂ ಕಾಲೇಜು ಉಡುಪಿಗೆ ಸಭಾಂಗಣದ ಖುರ್ಚಿ ಖರೀದಿಗೆ ರೂಪಾಯಿ 10000 (ಹತ್ತು ಸಾವಿರ) ವನ್ನು ಸಂಘದ ವತಿಯಿಂದ ದೇಣಿಗೆ ನೀಡಲಾಯಿತು.
ರಾಜ್ಯ ಸಂಘದ ಪ್ರತಿನಿಧಿ ಡಾ.ಜಿ ಎಂ ಗೊಂಡ, ಸ ಪ ಪೂ ಕಾಲೇಜು ಉಡುಪಿ ಪ್ರಾಂಶುಪಾಲರಾದ ಲೀಲಾ ಬಾಯಿ ಭಟ್,ಸಾಂಸ್ಕೃತಿಕ ಸಂಚಾಲಕರಾದ ಸುಚೇತಾ ಮತ್ತು ಪರೀಕ್ಷಾ ಸಂಚಾಲಕರಾದ ಮಂಜುನಾಥ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಅಧ್ಯಕ್ಷರಾದ ವರ್ಗೀಸ್ ಸ್ವಾಗತಿಸಿ, ಕಾರ್ಯದರ್ಶಿ ನಾಗರಾಜ ವೈದ್ಯ ವರದಿ ವಾಚಿಸಿ, ಖಜಾಂಚಿ ಜಗದೀಶ್ ಕುಮಾರ್ ವಂದಿಸಿದರು. ಪ್ರಾಂಶುಪಾಲರಾದ ವಿಶ್ವನಾಥ್ ಕರಬ ನಿರೂಪಿಸಿದರು.