Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅ.26ರಂದು ಬಪ್ಪಳಿಗೆಯ ಅಂಬಿಕಾಕ್ಕೆ ಪ್ರಖರ ವಾಗ್ಮಿ, ತುಮಕೂರಿನ ಹಾರಿಕಾ ಮಂಜುನಾಥ್ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳು ಹಾಗೂ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಆಶ್ರಯದಲ್ಲಿ ಅ.26ರಂದು ಬಪ್ಪಳಿಗೆಯ ಅಂಬಿಕಾ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಪಾರಂಪರಿಕ ದಿನಾಚರಣೆ ನಡೆಯಲಿದೆ.


ತುಮಕೂರಿನ ವಾಗ್ಮಿ ಹಾರಿಕಾ ಮಂಜುನಾಥ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ನಟ್ಟೋಜ ಉಪಸ್ಥಿತಲಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು