ಮುಡಾ ಹಗರಣ : ED ದಾಳಿ ಬೆನ್ನಲ್ಲೇ ವಾಕಿಂಗ್ ಮಾಡುತ್ತಿದ್ದ ಮುಡಾ ಮಾಜಿ ಆಯುಕ್ತ ಐಎಎಸ್ ಅಧಿಕಾರಿ ದಿನೇಶ್‌ಕುಮಾರ್ ಪರಾರಿ-ಕಹಳೆ ನ್ಯೂಸ್
ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದ ಬೆನ್ನಲ್ಲೇ ಮುಡಾದ ಮಾಜಿ ಆಯುಕ್ತ , ಐಎಎಸ್ ಅಧಿಕಾರಿ ದಿನೇಶ್‌ಕುಮಾರ್ ಪರಾರಿಯಾಗಿದ್ದಾರೆ.
ಇಂದು ಬೆಳಗ್ಗೆ ದಿನೇಶ್ ಕುಮಾರ್ ನೆಲೆಸಿದ್ದ ಬಾಣಸವಾಡಿಯ ದೀಪಿಕಾ ರಾಯಲ್ ಅಪಾರ್ಟ್‌ಮೆಂಟ್ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಡಿ ಅಧಿಕಾರಿಗಳ ದಾಳಿಯ ವೇಳೆ ದಿನೇಶ್ ಕುಮಾರ್ ವಾಕಿಂಗ್ ಮಾಡುತ್ತಿದ್ದರು. ಇಡಿ ಅಧಿಕಾರಿಗಳು ಮನೆಗೆ ಬಂದ ವಿಚಾರ ತಿಳಿದು ವಾಕಿಂಗ್ ಮಾಡುತ್ತಿದ್ದ ಸ್ಥಳದಿಂದಲೇ ದಿನೇಶ್ ಕುಮಾರ್ ಪರಾರಿಯಾಗಿದ್ದಾರೆ.
ಸದ್ಯ ಮೊಬೈಲ್ ನಂಬರ್ ಸ್ವಿಚ್ ಆಫ್ ಮಾಡಿರುವ ದಿನೇಶ್ ಕುಮಾರ್‌ಗಾಗಿ ಇಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.