Tuesday, December 3, 2024
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ದೀಪಾವಳಿ ಹಬ್ಬಕ್ಕೆ ದರ್ಶನ್‌ಗೆ ಬಿಗ್‌ ಗಿಫ್ಟ್‌ ; 5 ತಿಂಗಳ ಬಳಿಕ ದರ್ಶನ್ ರಿಲೀಸ್ ; ಹೈಕೋರ್ಟ್‌ನಿಂದ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು: ದೀಪಾವಳಿ  ಹಬ್ಬಕ್ಕೆ ದರ್ಶನ್‌ಗೆ ಬಿಗ್‌ ಗಿಫ್ಟ್‌ ಸಿಕ್ಕಿದ್ದು 140 ದಿನಗಳ ಬಳಿಕ ದರ್ಶನ್‌ (Darshan) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧನಕ್ಕೆ ಒಳಗಾದ ನಟ ದರ್ಶನ್‌ಗೆ ಹೈಕೋರ್ಟ್‌ (High Court) 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್‌ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತಿ ವಾರ ವೈದ್ಯಕೀಯ ವರದಿಯನ್ನು ಸಲ್ಲಿಕೆ ಮಾಡಬೇಕು. ಪಾಸ್‌ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕೆಂದು ಕೋರ್ಟ್ ಷರತ್ತು ವಿಧಿಸಿದೆ. ದರ್ಶನ್ ಪರ ವಕೀಲರು ಮೂರು ತಿಂಗಳ ಜಾಮೀನು ಕೋರಿದ್ದರು. ಆದರೆ ಕೋರ್ಟ್ 6 ವಾರಗಳ ಜಾಮೀನು ಮಾತ್ರ ಮಂಜೂರು ಮಾಡಿ ದರ್ಶನ್‌ ಅವರಿಗೆ ತಾತ್ಕಾಲಿಕ ರಿಲೀಫ್‌ ನೀಡಿದೆ.  ನ್ಯಾಯಾಲಯದ ಎಲ್ಲಾ ಪ್ರಕ್ರಿಯೆ ಇಂದೇ ಪೂರ್ಣಗೊಂಡರೆ ಇಂದು ಸಂಜೆ ಅಥವಾ ರಾತ್ರಿಯೇ ದರ್ಶನ್‌ ಅವರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಹೀಗಾಗಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರು. ಈ ವಾದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್‌ ಪ್ರಸನ್ನ ಕುಮಾರ್ ತೀವ್ರ ಆಕ್ಷೇಪಿಸಿದ್ದರು.

ಮೈಸೂರಿನಲ್ಲಿ ಶೂಟಿಂಗ್‌ ತೆರಳಿದ್ದ ದರ್ಶನ್‌ ಅವರನ್ನು ಪೊಲೀಸರು ಜೂನ್ 11 ರಂದು ಬೆಂಗಳೂರಿಗೆ ಕರೆ ತಂದು ಬಂಧಿಸಿದ್ದರು. 11 ದಿನಗಳ ಕಾಲ ಪೊಲೀಸರ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಿದ್ದ ದರ್ಶನ್ ಬಳಿಕ ವಿಚಾರಣಾ ಕೈದಿಯಾಗಿ ಜೈಲು ಸೇರಿದ್ದರು.

ಜೂನ್ 22ಕ್ಕೆ ನ್ಯಾಯಾಂಗ ಬಂಧನ ಜಾರಿಯಾಗಿತ್ತು.  ಪರಪ್ಪನ ಅಗ್ರಹಾರ ಜೈಲಲ್ಲಿ ಪಾರ್ಟಿ ಮಾಡಿದ ಫೋಟೋ ವೈರಲ್‌ ಆದ ನಂತರ ಕೋರ್ಟ್‌ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿಸಿತ್ತು. 69 ದಿನ ಪರಪ್ಪನ ಅಗ್ರಹಾರದಲ್ಲಿ ಕಳೆದ ದರ್ಶನ್ ಆಗಸ್ಟ್ 29 ಕ್ಕೆ ಬಳ್ಳಾರಿ ಜೈಲಿಗೆ ಆಗಮಿಸಿದ್ದರು. 5 ತಿಂಗಳಿನಿಂದ ಕಂಬಿ ಹಿಂದೆ ಕಾಲ ಕಳೆದಿದ್ದ ದರ್ಶನ್‌ಗೆ ಈಗ ಬಿಡುಗಡೆಯಾಗುವ ಭಾಗ್ಯ ಸಿಕ್ಕಿದೆ.

ವಾದ-ಪ್ರತಿವಾದ ಏನಿತ್ತು?
ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ದರ್ಶನ್ ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದನ್ನು ಹೀಗೆ ಬಿಟ್ಟರೆ ಪರಿಸ್ಥಿತಿ ಗಂಭೀರವಾಗಲಿದೆ. ದರ್ಶನ್ ಸಮಸ್ಯೆ ಅವರಿಗೆ ಮಾತ್ರ ಗೊತ್ತು, ನಡಿಯೋಕೆ ಆಗಲ್ಲ.. ಕೂರೋದಿಕ್ಕೆ ಆಗಲ್ಲ. ಅವರಿಗೆ ಸಾಂಪ್ರದಾಯಿಕ/ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನ್ಯಾಯಾಧೀಶರಿಗೆ ಮನವರಿಕೆ ಮಾಡಿದ್ದರು.

ಮೈಸೂರಿನ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಆಗಲು ಬಯಸಿದ್ದಾರೆ. ದರ್ಶನ್ ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡ. ಮೈಸೂರಲ್ಲಿ ಚಿಕಿತ್ಸೆ ಪಡೆಯುವುದರಿಂದ ಪ್ರಾಸಿಕ್ಯೂಷನ್ ಸಾಕ್ಷಿಗೂ ಸಮಸ್ಯೆ ಆಗಲ್ಲ. ಕೋರ್ಟ್ ಷರತ್ತು ವಿಧಿಸಿ, 3 ತಿಂಗಳು ಮಧ್ಯಂತರ ಜಾಮೀನು ಕೊಡಬೇಕು ಎಂದು ದರ್ಶನ್ ಪರ ವಕೀಲರು ಕೇಳಿಕೊಂಡಿದ್ದರು.

ಎಸ್‌ಪಿಪಿ ಪ್ರಸನ್ನಕುಮಾರ್ ಪ್ರತಿವಾದ ಮಂಡಿಸಿ, ಮೆಡಿಕಲ್ ಬೋರ್ಡ್‌ನಲ್ಲಿ ಪರೀಕ್ಷೆ ಮಾಡಿಸೋಣ. ವಿಕ್ಟೋರಿಯಾ/ಬೌರಿಂಗ್‌ನಲ್ಲಿ ಪರೀಕ್ಷೆ ಮಾಡಿಸಬಹುದು. ಮಂಡಳಿ ವರದಿ ಆಧರಿಸಿ ನಿರ್ಣಯ ತೆಗೆದುಕೊಳ್ಳಬೇಕು. ಖಾಸಗಿ ಆಸ್ಪತ್ರೆ ಬದಲು ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಆಗಬೇಕು ಎಂದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಆರೋಗ್ಯದ ವಿಚಾರವಾಗಿ ನಿರ್ಲಕ್ಷ್ಯ ಸಲ್ಲ. ಆರೋಗ್ಯ ಎಲ್ಲರ ಹಕ್ಕು ಎಂದು ಅಭಿಪ್ರಾಯಪಟ್ಟು ಬುಧವಾರಕ್ಕೆ ಆದೇಶ ಕಾಯ್ದಿರಿಸಿದ್ದರು.