Thursday, March 27, 2025
ಕಾಸರಗೋಡುಕೇರಳಕ್ರೈಮ್

ಕಿಡಿಗೇಡಿಗಳಿಂದ ಎಡನೀರು ಶ್ರೀಗಳ ಕಾರು ತಡೆದು ದಾಳಿ ; ವ್ಯಾಪಕ ಖಂಡನೆ – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ನಿನ್ನೆ ದಾಳಿ ನಡೆದಿದ್ದು ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ – ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದವರ ಪೈಕಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದರೆಂದೂ, ಕಾರಿನ ಗಾಜಿಗೆ ಹಾನಿಯಾಗಿದೆಯೆಂದೂ ತಿಳಿದುಬಂದಿದೆ. ಈ ಸಂದರ್ಭ ಸ್ವಾಮೀಜಿಯವರು ಕಾರು ನಿಲ್ಲಿಸದೇ ಶಾಂತರಾಗಿ ಮುಂದುವರಿದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆ ಇಂದು ತಡವಾಗಿ ಬೆಳಕಿಗೆ ಬಂದಿದ್ದು, ಕಾಸರಗೋಡು ಪೋಲಿಸರು ಘಟನೆ ಮಾಹಿತಿ ಪಡೆದಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ