Friday, November 15, 2024
ಕಾಸರಗೋಡುಕೇರಳಕ್ರೈಮ್

ಎಡನೀರು ಶ್ರೀಗಳ ಕಾರು ತಡೆದ ದುಷ್ಕರ್ಮಿಗಳನ್ನು ಬಂಧಿಸದೇ ಇದ್ದಲ್ಲಿ ಕಾಸರಗೋಡು ಪೋಲಿಸ್ ವರಿಷ್ಠಾಧಿಕಾರಿ ಕಛೇರಿ ಮುಂದೆ ಆಹೋರಾತ್ರಿ ಧರಣಿ ಎಚ್ಚರಿಕೆ ; ಯಾವ ಹೋರಾಟಕ್ಕೂ ನಾವು ಸೈ ಎಂದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು – ಕಹಳೆ ನ್ಯೂಸ್

ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ನಿನ್ನೆ ದಾಳಿ ನಡೆದಿದ್ದು ಈ ಘಟನೆಯನ್ನು ವಿಧಾನಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಖಂಡಿಸಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ – ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದವರ ಪೈಕಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದರೆಂದೂ, ಕಾರಿನ ಗಾಜಿಗೆ ಹಾನಿಯಾಗಿದೆಯೆಂದೂ ತಿಳಿದುಬಂದಿದೆ. ಈ ಸಂದರ್ಭ ಸ್ವಾಮೀಜಿಯವರು ಕಾರು ನಿಲ್ಲಿಸದೇ ಶಾಂತರಾಗಿ ಮುಂದುವರಿದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ವಾಹನದ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಬೇಕು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೋಟ್ಯಾಂತರ ಹಿಂದೂಗಳ ಆರಾಧನಾ ಕೇಂದ್ರವಾದ ಎಡನೀರು ಸಂಸ್ಥಾನದ ಸ್ವಾಮೀಜಿಗಳ ವಾಹನದ ಮೇಲಾದ ಆದ ದಾಳಿ ಸಮಸ್ತ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದೆ. ಸ್ವಾಮೀಜಿಯವರ ಸಂರಕ್ಷಣಾ ನಾವು ಯಾವ ಹೋರಾಟಕ್ಕೂ ಸಿದ್ದ, ತಕ್ಷಣ ಕ್ರಮ ಜರುಗಿಸದಿದ್ದರೆ, ನಾವು ಕಾಸರಗೋಡು ಪೋಲಿಸ್ ವರಿಷ್ಠಾಧಿಕಾರಿ ಕಛೇರಿ ಮುಂದೆ ಆಹೋರಾತ್ರಿ ಧರಣಿ ನಡೆಸುತ್ತೇವೆ. ಯಾವ ಹಂತದ ಹೋರಾಟಕ್ಕೂ ನಾವು ಸಿದ್ದ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶ್ರೀಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕೇರಳ ಸರ್ಕಾರ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.