Sunday, January 19, 2025
ಕಾಸರಗೋಡುಕೇರಳಕ್ರೈಮ್ಸುದ್ದಿ

ಎಡನೀರು ಶ್ರೀಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕೇರಳ ಸರ್ಕಾರ ನೀಡಲಿ, ದುಷ್ಕರ್ಮಿಗಳನ್ನು ಬಂಧಿಸಲಿ ; ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಆಗ್ರಹ – ಕಹಳೆ ನ್ಯೂಸ್

ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ನಿನ್ನೆ ದಾಳಿ ನಡೆದಿದ್ದು ಈ ಘಟನೆಯನ್ನು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಖಂಡಿಸಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ – ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದವರ ಪೈಕಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದರೆಂದೂ, ಕಾರಿನ ಗಾಜಿಗೆ ಹಾನಿಯಾಗಿದೆಯೆಂದೂ ತಿಳಿದುಬಂದಿದೆ. ಈ ಸಂದರ್ಭ ಸ್ವಾಮೀಜಿಯವರು ಕಾರು ನಿಲ್ಲಿಸದೇ ಶಾಂತರಾಗಿ ಮುಂದುವರಿದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ವಾಹನದ ಮೇಲೆ ದುಷ್ಕರ್ಮಿಗಳ ದಾಳಿಯನ್ನು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರೋಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಲಕ್ಷಾಂತರ ಹಿಂದೂಗಳು ಭಕ್ತಿಯಿಂದ ಆರಾಧಿಸುವ ಎಡನೀರು ಸಂಸ್ಥಾನದ ಸ್ವಾಮೀಜಿಗಳ ವಾಹನದ ಮೇಲಾದ ಆದ ದಾಳಿಯನ್ನು ಖಂಡಿಸುತ್ತಾ , ಅವರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕೇರಳ ಸರ್ಕಾರ ನೀಡಬೇಕೆಂದು ಅರುಣ್ ಪುತ್ತಿಲ ಒತ್ತಾಯಿಸಿದ್ದಾರೆ.