Friday, November 15, 2024
ಕಾಸರಗೋಡುಕೇರಳಕ್ರೈಮ್ದಕ್ಷಿಣ ಕನ್ನಡಸುದ್ದಿ

ಎಡನೀರು ಶ್ರೀಗಳಿಗ ವಾಹನ ತಡೆದ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸಿ ; ಘಟನೆ ಖಂಡಿಸಿ, ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತ್ತಡ್ಕ ಆಕ್ರೋಶ – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ನಿನ್ನೆ ದಾಳಿ ನಡೆದಿದ್ದು, ಘಟನೆಯನ್ನು ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತ್ತಡ್ಕ ಖಂಡಿಸಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ – ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದವರ ಪೈಕಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದರೆಂದೂ, ಕಾರಿನ ಗಾಜಿಗೆ ಹಾನಿಯಾಗಿದೆಯೆಂದೂ ತಿಳಿದುಬಂದಿದೆ. ಈ ಸಂದರ್ಭ ಸ್ವಾಮೀಜಿಯವರು ಕಾರು ನಿಲ್ಲಿಸದೇ ಶಾಂತರಾಗಿ ಮುಂದುವರಿದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ವಾಹನದ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸಿ, ಹಿಂದೂಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕೇರಳ ಸರ್ಕಾರ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.