Sunday, January 19, 2025
ಅಂತಾರಾಷ್ಟ್ರೀಯದೆಹಲಿರಾಜಕೀಯರಾಷ್ಟ್ರೀಯಸುದ್ದಿ

‘ಇಡೀ ಜಗತ್ತು ಮೋದಿಯನ್ನು ಪ್ರೀತಿಸುತ್ತದೆ’; ಗೆಲುವಿನ ಬಳಿಕ ಮೊದಲ ಕರೆಯಲ್ಲೇ ಪ್ರಧಾನಿಯನ್ನು ಹಾಡಿ ಹೊಗಳಿದ ಟ್ರಂಪ್! – ಕಹಳೆ ನ್ಯೂಸ್

ವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ (Presidential Election) ಡೊನಾಲ್ಡ್ ಟ್ರಂಪ್ (Donald Trump) ಗೆದ್ದ ನಂತರ ಪ್ರಧಾನಿ ಮೋದಿ (PM Modi) ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದರು. ಪ್ರಧಾನಿ ಮೋದಿ ಅವರು ತಮ್ಮ ಸ್ನೇಹಿತ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಅದ್ಭುತವಾದ ಸಂಭಾಷಣೆಯನ್ನು ನಡೆಸಿದ್ದೇನೆ ಮತ್ತು ಅವರ ಮಹಾನ್ ಗೆಲುವಿಗೆ ಅಭಿನಂದನೆಗಳು ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ತಂತ್ರಜ್ಞಾನ, ರಕ್ಷಣೆ, ಇಂಧನ, ಬಾಹ್ಯಾಕಾಶ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತ-ಯುಎಸ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ನಾವು ಮತ್ತೊಮ್ಮೆ ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ ಎಂದು ಮೋದಿ ಹೇಳಿದ್ದರು. ಮೂಲಗಳ ಪ್ರಕಾರ, ಅಮೆರಿಕ ಚುನಾವಣೆಯಲ್ಲಿ ಗೆಲುವಿನ ನಂತರ ಪ್ರಧಾನಿ ಮೋದಿ ಟ್ರಂಪ್‌ಗೆ ಕರೆ ಮಾಡಿದ್ದರು. ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ನಿರ್ಣಾಯಕ ಗೆಲುವು ಮತ್ತು ಅತ್ಯುತ್ತಮ ಪ್ರದರ್ಶನಕ್ಕಾಗಿ ಪ್ರಧಾನಿ ಮೋದಿ, ಟ್ರಂಪ್ ಅವರನ್ನು ಅಭಿನಂದಿಸಿದರು.

ಮೋದಿ, ಭಾರತವನ್ನು ಹೊಗಳಿದ ಟ್ರಂಪ್

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಲಗಳ ಪ್ರಕಾರ, ಇಬ್ಬರೂ ನಾಯಕರು ವಿಶ್ವಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇಡೀ ಜಗತ್ತು ಪ್ರಧಾನಿ ಮೋದಿಯನ್ನು ಪ್ರೀತಿಸುತ್ತಿದೆ ಎಂದು ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ. ಭಾರತ ಅದ್ಭುತ ದೇಶ ಮತ್ತು ಪ್ರಧಾನಿ ಮೋದಿ ಅದ್ಭುತ ವ್ಯಕ್ತಿ ಎಂದು ಟ್ರಂಪ್ ಹೇಳಿದರು. ಮೋದಿ ಮತ್ತು ಭಾರತವನ್ನು ನನ್ನ ನಿಜವಾದ ಸ್ನೇಹಿತ ಎಂದು ಪರಿಗಣಿಸುವುದಾಗಿ ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿಗೆ ತಿಳಿಸಿದ್ದಾರೆ. ತಮ್ಮ ಗೆಲುವಿನ ನಂತರ ಮೊದಲು ಮಾತನಾಡಿದ ವಿಶ್ವ ನಾಯಕರಲ್ಲಿ ಪ್ರಧಾನಿ ಮೋದಿ ಕೂಡ ಒಬ್ಬರು ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಭಾರತಕ್ಕೆ ಟ್ರಂಪ್!

ಮುಂದಿನ ವರ್ಷ ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಲಿದ್ದಾರೆ. ವಾಸ್ತವವಾಗಿ, 2025 ರಲ್ಲಿ ಭಾರತದಲ್ಲಿ ಕ್ವಾಡ್ ಲೀಡರ್ಸ್ ಶೃಂಗಸಭೆ ನಡೆಯಲಿದ್ದು, ಇದರಲ್ಲಿ ಭಾಗವಹಿಸಲು ಟ್ರಂಪ್ ಭಾರತಕ್ಕೆ ಬರಲಿದ್ದಾರೆ. ಈ ಸಮ್ಮೇಳನದ ಸಂದರ್ಭದಲ್ಲಿ ಸದಸ್ಯ ರಾಷ್ಟ್ರಗಳ ಮುಖ್ಯಸ್ಥರು (ಭಾರತ, ಅಮೆರಿಕ, ಆಸ್ಟ್ರೇಲಿಯಾ ಮತ್ತು ಜಪಾನ್) ಭೇಟಿಯಾಗುವುದು ಸಂಪ್ರದಾಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅವರು ಪ್ರಧಾನಿ ಮೋದಿಯವರೊಂದಿಗೆ ವಿಶೇಷ ಸಭೆ ನಡೆಸಲಿದ್ದಾರೆ ಎಂದು ನಂಬಲಾಗಿದೆ.

ಟ್ರಂಪ್ ಗೆಲುವಿಗೆ ಪ್ರಧಾನಿ ಮೋದಿ ಅಭಿನಂದನೆ

ಇದಕ್ಕೂ ಮುನ್ನ ಡೊನಾಲ್ಡ್ ಟ್ರಂಪ್ ಗೆಲುವಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದರು. ಟ್ವಿಟರ್‌ನಲ್ಲಿ ಪ್ರಧಾನಿ ಮೋದಿ, ‘ನನ್ನ ಸ್ನೇಹಿತ ಡೊನಾಲ್ಡ್ ಟ್ರಂಪ್ ಅವರ ಐತಿಹಾಸಿಕ ಚುನಾವಣಾ ಗೆಲುವಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಹಿಂದಿನ ಅವಧಿಯ ಯಶಸ್ಸಿನ ಮೇಲೆ ನೀವು ನಿರ್ಮಿಸುತ್ತಿರುವಂತೆ, ಭಾರತ-ಯುಎಸ್ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಮ್ಮ ಸಹಕಾರವನ್ನು ನವೀಕರಿಸಲು ನಾನು ಎದುರು ನೋಡುತ್ತಿದ್ದೇನೆ. ನಮ್ಮ ಜನರ ಒಳಿತಿಗಾಗಿ ಮತ್ತು ಜಗತ್ತಿನಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ’ ಎಂದು ಬರೆದುಕೊಂಡಿದ್ದರು.

ಮೋದಿ-ಟ್ರಂಪ್ ದೂರವಾಣಿ ಕರೆ

ದೂರವಾಣಿ ಕರೆ ಮಾಡಿ ಮಾತನಾಡಿದ ಬಳಿಕ ಟ್ವೀಟ್ ಮಾಡಿದ್ದ ಮೋದಿ ‘ನನ್ನ ಸ್ನೇಹಿತರಾದ ಡೊನಾಲ್ಡ್ ಟ್ರಂಪ್​ ಅವರ ಜೊತೆ ಉತ್ತಮ ಸಂಭಾಷಣೆ ನಡೆಸಿದೆ. ಚುನಾವಣೆಯಲ್ಲಿ ಅದ್ಭುತ ವಿಜಯ ಸಾಧಿಸಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದೆನೆ. ತಂತ್ರಜ್ಞಾನ, ರಕ್ಷಣೆ, ಇಂಧನ, ಬಾಹ್ಯಾಕಾಶ ಮತ್ತು ಇತರ ಹಲವಾರು ಕ್ಷೇತ್ರಗಳಲ್ಲಿ ಭಾರತ-ಯುಎಸ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತೊಮ್ಮೆ ಟ್ರಂಪ್ ಅವರೊಂದಿಗೆ ಒಟ್ಟಿಗೆ ಕೆಲಸ ಮಾಡಲು ಎದುರುನೋಡುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.