Recent Posts

Monday, January 20, 2025
ಸುದ್ದಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಓಲಾ ಕಾರು ಚಾಲಕನ ಮೇಲೆ ಹಲ್ಲೆ – ಕಹಳೆ ನ್ಯೂಸ್

ಮಂಗಳೂರು: ಚಾಲಕ ಚಾಲಕರ ನಡುವೆಯೇ ಹಲ್ಲೆ ನಡೆಸಿದ ಘಟನೆಯು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬಾಡಿಗೆ ನಿರ್ವಹಿಸಲೆಂದು ಪ್ರಯಾಣಿಕರನ್ನು ಕರೆದುಕೊಂಡು ಹೋಗಿದ್ದ ಓಲಾ ಕಾರು ಚಾಲಕರ ಮೇಲೆ ಸ್ಥಳೀಯ ಕಾರು ಚಾಲಕರು ಹಲ್ಲೆ ನಡೆಸಿದ್ದಾನೆಂದು ವರದಿಯಾಗಿದೆ.

ನಗರದಿಂದ ಪ್ರಯಾಣಿಕರನ್ನು ಕರೆದುಕೊಂಡು ಹೋಗಿದ್ದ ಓಲಾ ಕಾರು ಚಾಲಕ ತನ್ನ ಕಾರನ್ನು ಏರ್ಪೋರ್ಟ್ನಲ್ಲಿ ನಿಲುಗಡೆಗೊಳಿಸಿದ್ದರು. ಈ ಸಂದರ್ಭ ಸ್ಥಳೀಯ ಕಾರು ಚಾಲಕರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದು, ಅಲ್ಲಿಂದ ತೆರಳುವಂತೆ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ, ಓಲಾ ಕಾರು ಚಾಲಕ ತೆರಳಲು ನಿರಾಕರಿಸಿದಾಗ ಸ್ಥಳೀಯ ಕಾರು ಚಾಲಕರು ಈತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಈ ವೇಳೆ ಅಲ್ಲಿಗೆ ಧಾವಿಸಿ ಬಂದ ಸುಮಾರು 25ಕ್ಕೂ ಮಿಕ್ಕಿ ಓಲಾ ಚಾಲಕರ ಮೇಲೆಯೂ ಹಲ್ಲೆ ನಡೆದಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಿಂದ ಆಕ್ರೋಶಗೊಂಡ ಓಲಾ ಕಾರು ಚಾಲಕರು ಆಗಮಿಸಿ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲು ಬರುವ ಓಲಾ ಕಾರು ಚಾಲಕರ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಯುತ್ತಿದ್ದು, ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ರು.

ಇದೀಗ ಸ್ಥಳೀಯ ಕಾರು ಚಾಲಕರ ದಬ್ಬಾಳಿಕೆ ಮಿತಿ ಮೀರಿದ್ದು, ಪೊಲೀಸರು ಕಾನೂನು ಕ್ರಮ ಕೈಗೊಳ್ಳಬೇಕೆಂದು ಓಲಾ ಕಾರು ಚಾಲಕರು ಒತ್ತಾಯಿಸಿದ್ದಾರೆ. ಈ ಕುರಿತು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.