Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ-ಕಹಳೆ ನ್ಯೂಸ್

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರು ಹಾಗೂ ಬಾಲಕಿಯರು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ದ್ವಿತೀಯ ವಿಜ್ಞಾನ ವಿಭಾಗದ ಅದ್ವಿತ್ ಶರ್ಮ ಚಿನ್ನದ ಪದಕ, ಪ್ರಥಮ ವಾಣಿಜ್ಯ ವಿಭಾಗದ ಪ್ರಮಥ್ ಎಮ್ ಭಟ್ ಹಾಗೂ ಪ್ರಾಪ್ತಿ ಶೆಟ್ಟಿ ಬೆಳ್ಳಿಯ ಪದಕ, ದ್ವಿತೀಯ ವಿಜ್ಞಾನ ವಿಭಾಗದ ಸಾತ್ವಿ ಬಿ.ಕೆ ಕಂಚಿನ ಪದಕವನ್ನು ಗಳಿಸಿರುತ್ತಾರೆ.
ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು