Tuesday, December 3, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಅಂತರ್ ಕಾಲೇಜು ಮಟ್ಟದ ಉತ್ಕರ್ಷ& ಫೆಸ್ಟ್ ಶೈಕ್ಷಣಿಕ ಸ್ಪರ್ಧಾ ಕಾರ್ಯಕ್ರಮವು 2024-ಕಹಳೆ ನ್ಯೂಸ್

 ಕಲ್ಲಡ್ಕ; ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಅಂತರ್ ಕಾಲೇಜು ಮಟ್ಟದ ಉತ್ಕರ್ಷ& ಫೆಸ್ಟ್ ಶೈಕ್ಷಣಿಕ ಸ್ಪರ್ಧಾ ಕಾರ್ಯಕ್ರಮವು ತಾ. 08/11/2024ರಂದು ಅತ್ಯದ್ಭುತವಾಗಿ ನಡೆಯಿತು.

ಬೆಳಿಗ್ಗೆ 10 ಗಂಟೆಗೆ ಇದರ ಉದ್ಘಾಟನಾ ಸಮಾರಂಭವು ದೀಪಪ್ರಜ್ವಲನದೊಂದಿಗೆ ನಡೆದಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ, ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರೂ
ಮಾರ್ಗದರ್ಶಕರೂ ಆದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಪ್ರಪಂಚದ ಇತರ ದೇಶಗಳಿಗಿಂತ ನಮ್ಮ
ಭಾರತದೇಶದ ಶ್ರೇಷ್ಠತೆ, ಭಾರತೀಯ ಸಂಸ್ಕೃತಿ, ಸಂಪ್ರದಾಯ, ಚಿಂತನೆಗಳ ಮಹತ್ವಗಳ ಕುರಿತು ಹೇಳುತ್ತಾ, ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದೊಂದಿಗೆ ಇವುಗಳ ರಕ್ಷಣೆಯಲ್ಲಿ
ಪಣತೊಡಬೇಕು, ದೇಶವನ್ನು ಶ್ರೇಷ್ಠ ಮಟ್ಟಕ್ಕೇರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಕೇವಲ ಅಂಕ- ಶ್ರೇಯಾಂಕಗಳು ಮಾತ್ರವಲ್ಲದೆ, ಮನುಷ್ಯನಾಗಿ ಬಾಳಲು ಬೇಕಿರುವ ಸಂಸ್ಕಾರಯುತ
ಶಿಕ್ಷಣ ಕೊಡುವ ಪ್ರಯತ್ನ ಇಲ್ಲಿ ನಡೆಯುತ್ತಿರುವುದು ಎಂಬುದಾಗಿ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಗತಿಪರ ಕೃಷಿಕರಾದ ಶಿವಪ್ಪ ಪೂಜಾರಿ, ನಿವೃತ್ತ ಪೋಲಿಸ್ ಅಧಿಕಾರಿ ಶ್ರೀ ರಾಮಪ್ರಸಾದ್, ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯ ಧೀರಜ್ ಬಲ್ಲೆಕೋಡಿ ಹಾಗೂ ಸುಜಿತ್ ಕೊಟ್ಟಾರಿ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಪೋಲಿಸ್ ಅಧಿಕಾರಿ ಶ್ರೀ ರಾಮಪ್ರಸಾದ್ ಅವರು, ಇಂದಿನ ಕಾಲದಲ್ಲಿ
ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ನಾಶಪಡಿಸಿಕೊಳ್ಳುವ ಸಂದರ್ಭದಲ್ಲಿ ಸಂಸ್ಕಾರಯುತ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭರವಸೆ ನೀಡುತ್ತಿರುವ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀರಾಮ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ, ಉಪಪ್ರಾಂಶುಪಾಲ ಯತಿರಾಜ್
ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಸಿಎ ವಿದ್ಯಾರ್ಥಿನಿ ಕು. ದಿವ್ಯಲಕ್ಷ್ಮಿ ಸ್ವಾಗತಿಸಿ, ಬಿಸಿಎ ವಿದ್ಯಾರ್ಥಿ ಜಯಸೂರ್ಯ, ಬಿಕಾಂ ವಿದ್ಯಾರ್ಥಿನಿ ಕು. ಪುನೀತಾ ಕಾರ್ಯಕ್ರಮ ನಿರ್ವಹಿಸಿದರು.