Recent Posts

Sunday, January 19, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು-ಪುಣೆ ನೇರ ವಿಮಾನ ಪುನರ್ ಆರಂಭಿಸುವಂತೆ ಶಾಸಕ ಕಾಮತ್ ಮನವಿ- ಕಹಳೆನ್ಯೂಸ್

ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರು ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವರಾದ ಶ್ರೀ ಮುರಳೀಧರ್ ಮೊಹೋಲ್ ರವರನ್ನು ಭೇಟಿಯಾಗಿ ಸ್ಥಗಿತಗೊಂಡಿರುವ ಮಂಗಳೂರು-ಪುಣೆ ನೇರ ವಿಮಾನಯಾನ ಪುನರ್ ಆರಂಭಿಸುವಂತೆ ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು-ಪುಣೆ ನಡುವೆ ಅನೇಕ ರೀತಿಯಲ್ಲಿ ನೇರ ಸಂಬಂಧಗಳಿದ್ದು ದಿನ ನಿತ್ಯ, ಸಾರ್ವಜನಿಕರು, ಉದ್ಯಮಿಗಳು, ಉದ್ಯೋಗಿಗಳು ಸೇರಿದಂತೆ ಅನೇಕಾರು ಜನರ ಓಡಾಟವಿದೆ. ಹಾಗಾಗಿ ಈ ಹಿಂದಿದ್ದ ನೇರ ವಿಮಾನ ಸೇವೆಯಿಂದ ಅನೇಕ ಪ್ರಯಾಣಿಕರಿಗೆ ಸಹಾಯವಾಗುತ್ತಿದ್ದು ಪ್ರಸ್ತುತ ಈ ಸೇವೆ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲತೆ ಉಂಟಾಗಿದೆ. ಈ ಬಗ್ಗೆ ಈ ಹಿಂದೆ ಪುಣೆ ಹಾಗೂ ಮಂಗಳೂರಿನ ಉದ್ಯಮಿಗಳು ಮನವಿ ಸಲ್ಲಿಸಿದ್ದು ಅದರಂತೆ ವಿಶೇಷ ಆದ್ಯತೆಯ ಮೇರೆಗೆ ಮನವಿಯನ್ನು ಪರಿಗಣಿಸಿ ವಿಮಾನಯಾನವನ್ನು ಪುನರ್ ಆರಂಭಿಸುವಂತೆ ಶಾಸಕರು ಮನವಿ ಮಾಡಲಾಗಿ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹೋಟೆಲ್ ಉದ್ಯಮಿಗಳ ಸಂಘದ ಸಂತೋಷ್ ಶೆಟ್ಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.