Sunday, January 19, 2025
ಕುಂದಾಪುರ

ಸ್ಥಳೀಯ ಅಭ್ಯರ್ಥಿಗಳು ಉಚಿತ ವಿದ್ಯುತ್ ಕಂಬ ಹತ್ತಿ ಇಳಿಯುವ ತರಬೇತಿಯನ್ನು ಪಡೆದುಕೊಳ್ಳುವಂತೆ: ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಮನವಿ  -ಕಹಳೆ ನ್ಯೂಸ್

ಕುಂದಾಪುರ: ನವಂಬರ್ 20ರ ತನಕ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ, ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಸಲುವಾಗಿ ನವಂಬರ್ 11ರಿಂದ 13ರ ತನಕ ಕುಂದಾಪುರ ಗಾಂಧಿ ಮೈದಾನದಲ್ಲಿ ವಿದ್ಯುತ್ ಕಂಬ ಹತ್ತಿ ಇಳಿಯುವ ಉಚಿತ ತರಬೇತಿಯನ್ನು ಮೆಸ್ಕಾಂ ಇಲಾಖೆಯಿಂದ ಆಯೋಜಿಸಲಾಗಿದ್ದು.

ಜಾಹೀರಾತು
ಜಾಹೀರಾತು
ಜಾಹೀರಾತು

ಎಸ್ ಎಸ್ ಎಲ್ ಸಿ. ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಭಾವಚಿತ್ರ ಇರುವ ಗುರುತಿನ ಚೀಟಿಯೊಂದಿಗೆ (ಆಧಾರ್ ಪ್ರತಿ) ಯೊಂದಿಗೆ ಆಗಮಿಸಿ ಕಂಬ ಹತ್ತಿ ಇಳಿಯುವ ತರಬೇತಿಯನ್ನು ಪಡೆದುಕೊಂಡು. ಉದ್ಯೋಗ ಅವಕಾಶವನ್ನು ಪಡೆದುಕೊಳ್ಳಬೇಕೆಂದು ಆಶಯ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೂ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಅಧಿಕಾರಿಗಳು ಮತ್ತು ಲೈನ್ ಮ್ಯಾನ್ ರವರು ಸಾರ್ವಜನಿಕವಾಗಿ ಉತ್ತಮವಾದ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಶ್ಲಾಘನೀಯವಾಗಿದೆ ಎಂದರು.

ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.