Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಗ್ಲಾಸ್ ಚೂರಿನಿಂದ ಪತ್ನಿ ಹಾಗೂ ಮಗುವನ್ನು ತಿವಿದು ಕೊಲೆ ಮಾಡಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪತಿ – ಕಹಳೆ ನ್ಯೂಸ್

ಮುಲ್ಕಿ : ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದ ಭೀಕರ ಕೊಲೆ ಪ್ರಕರಣದ ಕುರಿತಂತೆ ಮಂಗಳೂರು ಪೆÇಲೀಸ್ ಆಯುಕ್ತರು ಮಾಹಿತಿ ನೀಡಿದ್ದು, ಕಾರ್ತಿಕ್ ತನ್ನ ಹೆಂಡತಿ ಮತ್ತು ಮಗುವನ್ನು ಗ್ಲಾಸ್ ಚೂರಿನಿಂದ ತಿವಿದು ಕೊಲೆ ಮಾಡಿ ಬಳಿಕ ತಾನು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದ್ದು, ಪತ್ನಿ ಪ್ರಿಯಾಂಕ (28), ಮಗು ಹೃದಯ್ (4) ಹತ್ಯೆಗೀಡಾದ ದುರ್ದೈವಿಗಳು.
ಆರೋಪಿ ಕಾರ್ತಿಕ್ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ಮುಲ್ಕಿಯ ಬೆಳಾಯರುನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶುಕ್ರವಾರ ಮಧ್ಯಾಹ್ನ ವ್ಯಕ್ತಿಯೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸುವಾಗ ಆತ್ಮಹತ್ಯೆ ಮಾಡಿಕೊಂಡವನು ಪಕ್ಷಕೆರೆಯ ಕಾರ್ತಿಕ್ ಭಟ್ ಎಂದು ತಿಳಿದಿದ್ದು, ಮನೆಗೆ ಬಂದಾಗ ಪತ್ನಿ ಮಗು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು