Recent Posts

Sunday, January 19, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಇಂಡಿಯನ್ ಬುಕ್ ಆಫ್ ರೆಕಾಡ್ಸ್ ನಲ್ಲಿ ಹೆಸರು ಮಾಡಿದ್ದ ಪೂರ್ವಿ ಅನಾರೋಗ್ಯದಿಂದ ನಿಧನ-ಕಹಳೆ ನ್ಯೂಸ್

ಪಣಂಬೂರು: ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್ ಎಸ್. ಕುಂದರ್ ವೈಶಾಲಿ ಎಲ್. ಬೆಂಗ್ರೆ ಅವರ ಪುತ್ರಿ, ಲಿಮ್ಕಾ ಬುಕ್ ದಾಖಲೆಯ ಪೂರ್ವಿ (7)
ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನ ಹೊಂದಿದಳು.

2019ರಲ್ಲಿ 1 ನಿಮಿಷದಲ್ಲಿ ದಾಖಲೆಯ ರೈಮ್ಸ್ ಆಟವಾಡಿ ಇಂಡಿಯನ್ ಬುಕ್ ಆಫ್ ರೆಕಾಡ್ಸ್  ನಲ್ಲಿ  ಹೆಸರು ಮಾಡಿದ್ದಳು. ಸಣ್ಣ ಪ್ರಾಯದಲ್ಲೇ ಚುರುಕಿನಿಂದ ಕೂಡಿದ್ದ ಪೂರ್ವಿ ಫುಟ್‌ಬಾಲ್, ಭರತನಾಟ್ಯದಲ್ಲಿ ತನ್ನ ಸಾಮರ್ಥ್ಯ ಪ್ರದರ್ಶಿಸಿ ಜನರ ಪ್ರೀತಿಗೆ ಪಾತ್ರವಾಗಿದ್ದಳು. ವಿವಿಧ ಸಂಘ ಸಂಸ್ಥೆಯಿAದ ಸಮ್ಮಾನ ಪಡೆದುಕೊಂಡಿದ್ದಳು.

ಜಾಹೀರಾತು
ಜಾಹೀರಾತು
ಜಾಹೀರಾತು

ಗ್ರೀನ್ ವುಡ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಕಲಿಯುತ್ತಿದ್ದ ಪೂರ್ವಿ ಅನಾರೋಗ್ಯಕ್ಕೀಡಾದಾಗ ಮಂಗಳೂರಿಗೆ ಬಂದು ಖಾಸಗಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಅವರ ನಿಧನಕ್ಕೆ ಬೆಂಗ್ರೆ ವಿದ್ಯಾರ್ಥಿ ಸಂಘ, ಸ್ಥಳೀಯ ಸಂಘ=ಸAಸ್ಥೆಗಳು ಶೋಕ ವ್ಯಕ್ತಪಡಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು