Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಸ್ಯಾನಿಟೈಸರ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಹಾಸ್ಟೆಲ್ ವಿದ್ಯಾರ್ಥಿನಿ : ಆಸ್ಪತ್ರೆಗೆ ದಾಖಲು-ಕಹಳೆ ನ್ಯೂಸ್

ನೆರಿಯ:(ನ.11) ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನೆರಿಯದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ ನೆರಿಯ ಗ್ರಾಮದ ವಾಲ್ಮೀಕಿ ಆಶ್ರಮ ಶಾಲೆಯ ಹಾಸ್ಟೆಲ್ ನ ಎಂಟನೇ ತರಗತಿಯಲ್ಲಿ ಕಲಿಯುತ್ತಿದ್ದ ವಿಜಯಪುರದ ವಿದ್ಯಾರ್ಥಿನಿ ಬೆಳಿಗ್ಗೆ ಸ್ಯಾನಿಟೈಸರ್ ಸೇವಿಸಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದು,ತಕ್ಷಣ ಅವಳನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಕಳೆದ ಕೆಲವು ದಿನಗಳಿಂದ ಮನೆಗೆ ಹೋಗುತ್ತೇನೆ ಇಲ್ಲಿ ಇರುವುದಿಲ್ಲ ಎಂದು ಹೇಳುತ್ತಿದ್ದಳು ಎನ್ನಲಾಗಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದಳು ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು