Thursday, November 14, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಎಂಸಿಎ ಪ್ರವೇಶಾಕಾಂಕ್ಷಿಗಳಿಗೆ ಸೇತುಬಂಧ ತರಗತಿ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಆಶ್ರಯದಲ್ಲಿ Pಉಅಇಖಿ ಅಥವಾ ಏಒಂಖಿ ಪ್ರವೇಶ ಪರೀಕ್ಷೆಯನ್ನು ಬರೆದು ಎಂಸಿಎ ಸ್ನಾತಕೋತ್ತರ ಪದವಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಎರಡು ವಾರಗಳ ಸೇತುಬಂಧ ತರಗತಿಗಳನ್ನು ಆಯೋಜಿಸಲಾಗಿದೆ. ಪರಿಣಾಮಕಾರಿ ಸಂವಹನ, ಸಮಸ್ಯೆ ಪರಿಹರಿಸುವ ಕೌಶಲಗಳು ಮತ್ತು ಪ್ರೋಗ್ರಾಮಿಂಗ್ ಭಾಷೆಗಳಂತಹ ಪ್ರಮುಖ ವಿಷಯಗಳನ್ನು ಕೇಂದ್ರೀಕರಿಸಿ ನಡೆಸಲಾಗುವ ಈ ತರಗತಿಯ ಮೂಲಕ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ನಡುವಿನ ಅಂತರವನ್ನು ಕಡಿಮೆಗೊಳಿಸುವ ಗುರಿಯನ್ನು ಹೊಂದಲಾಗಿದೆ. ಪ್ರಾಯೋಗಿಕ ಪರಿಣತಿಗಾಗಿ ಹ್ಯಾಂಡ್ಸ್ ಆನ್ ಸೆಷನ್‌ಗಳನ್ನೂ ನಡೆಸಲಾಗುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ತರಗತಿಗಳ ಉದ್ಘಾಟನೆಯನ್ನು ನಡೆಸಿದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಶುಭ ಹಾರೈಸಿದರು. ತರಬೇತಿ ಮತ್ತು ನೇಮಕಾತಿ ವಿಭಾಗ ಮುಖ್ಯಸ್ಥೆ
ಪ್ರೊ.ವಂದನಾ ಶಂಕರ್, ಎಂಸಿಎ ವಿಭಾಗದ ನಿರ್ದೇಶಕಿ ಡಾ.ಜ್ಯೋತಿಮಣಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 33 ಎಂಸಿಎ ಪ್ರವೇಶಾಕಾಂಕ್ಷಿಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು