Sunday, January 19, 2025
ಬೆಳ್ತಂಗಡಿಸುದ್ದಿ

ನ.14ರಂದು ಧರ್ಮಸ್ಥಳದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವ- ಸಹಾಯ ಸಂಘಗಳ ಸದಸ್ಯರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರವರಿಂದ ಲಾಭಾಂಶ ವಿತರಣಾ ಕಾರ್ಯಕ್ರಮ – ಕಹಳೆ ನ್ಯೂಸ್

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ (ರಿ.) ನ ಸ್ವ- ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವು ನ.14ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್‌ ರವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್‌ ಗುಂಡೂರಾವ್ ರವರು ,

ಜಾಹೀರಾತು
ಜಾಹೀರಾತು
ಜಾಹೀರಾತು

ನಬಾರ್ಡ್‌ ಬ್ಯಾಂಕ್‌ ಅಧ್ಯಕ್ಷರಾದ ಶಾಜಿ ಕೆ.ವಿ. ಮುಂಬೈ, ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ವಿ.ಹೆಗ್ಗಡೆಯವರು , ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ, ಬೆಳ್ತಂಗಡಿ ತಾಲೂಕು ಶಾಸಕರಾದ ಹರೀಶ್‌ ಪೂಂಜರವರು, ಭಾಗವಹಿಸಲಿದ್ದಾರೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಿಲ್‌ ಕುಮಾರ್‌ ಎಸ್.ಎಸ್. ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.