Friday, November 22, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ “ಸೈನ್ಸಿಯಾ” ಸಮಾರೋಪ-ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ವಿಜ್ಞಾನ ವಿಭಾಗ ಹಾಗೂ ವಿಜ್ಞಾನ ವೇದಿಕೆ ಇದರ ಸಹಯೋಗದೊಂದಿಗೆ ನ9 ರಂದು ಕಾಲೇಜು ಸಭಾಂಗಣದಲ್ಲಿ
‘ಸೈನ್ಸಿಯಾ’ ಇದರ ಸಮಾರೋಪ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸಂತ ಫಿಲೋಮಿನಾ ಪದವಿ ಕಾಲೇಜಿನ ವಿಶ್ರಾಂತ ಉಪ ಪ್ರಾಂಶುಪಾಲರಾದ ಪ್ರೊ. ಗಣೇಶ್ ಭಟ್ ಮಾತನಾಡಿ, ವಿಜ್ಞಾನ ಕೇವಲ ಒಂದು ಕಲಿಕೆಯ ವಿಷಯವಾಗಿರದೆ, ಅದೊಂದು ಯೋಚನಾ ಲಹರಿ ಆಗಿರುತ್ತದೆ. ವಿಜ್ಞಾನವು ನಮಗೆ ನಮ್ಮ ಸುತ್ತಲಿನ ಪರಿಸರದ ಬಗ್ಗೆ ಪ್ರಶ್ನಿಸುವ ಮನೋಭಾವವನ್ನು ಕಲಿಸಿಕೊಡುತ್ತದೆ ಅಲ್ಲದೆ ವಿಜ್ಞಾನವು ವಿವಿಧ ಸಂಸ್ಕೃತಿ, ಪ್ರದೇಶ ಮತ್ತು ಭಾಷೆಯ ಜನರನ್ನು ಒಟ್ಟಿಗೆ ಸೇರಿಸುತ್ತದೆ. ಇಂದು ವಿದ್ಯಾರ್ಥಿಗಳಿಗೆ ಸಾಕಷ್ಟು ಮಾಹಿತಿಗಳು ನೇರವಾಗಿ ಲಭ್ಯವಿರುವುದರಿಂದ ವಿದ್ಯಾರ್ಥಿಗಳು ತುಂಬಾ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಾಗಿದೆ. ನಮ್ಮ ಹಿಂದಿನ ವಿಜ್ಞಾನಿಗಳು ಕೇವಲ ಕನಸಲ್ಲಿ ಅಷ್ಟೇ ಕಂಡಿರಬಹುದಾದಷ್ಟು ಮಾಹಿತಿಗಳು ಇಂದು ನಮಗೆ ನಮ್ಮ ಬೆರಳ ತುದಿಯಲ್ಲಿ ಲಭ್ಯವಿದೆ. ವಿಜ್ಞಾನವನ್ನು ಅಭ್ಯಸಿಸುವ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯವನ್ನೂ ಕುತೂಹಲದಿಂದ ನೋಡುವ ಮನೋಭಾವ ಹಾಗು ವಿಮರ್ಶಾತ್ಮಕವಾಗಿ ಯೋಚನೆ ಮಾಡುವುದನ್ನು ಮೈಗೂಡಿಸಿಕೊಳ್ಳಬೇಕು. ಅಷ್ಟೇ ಅಲ್ಲದೆ ಜೀವನ ಮೌಲ್ಯಗಳನ್ನು ಅನುಸರಿಸುತ್ತಾ, ಪರಸ್ಪರ ಸಹಕಾರಿಯಾಗಿ ವೈಜ್ಞಾನಿಕ ಆವಿಷ್ಕಾರಗಳತ್ತ ಗಮನಹರಿಸಬೇಕು ಎಂದು ಕರೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ವಿಜ್ಞಾನವು ಕೇವಲ ತರಗತಿಯ ನಾಲ್ಕು ಗೋಡೆಗಳ ನಡುವೆ ಕಲಿಯುವ ವಿಷಯವಾಗಿರದೇ ಹಲವಾರು ಕೌತುಕಗಳ ಗೂಡಾಗಿದೆ. ಮಾನವೀಯ ಮೌಲ್ಯಗಳನ್ನು ಒಳಗೊಂಡ ವೈಜ್ಞಾನಿಕ ಮನೋಭಾವ ಯಶಸ್ಸನ್ನು ನೀಡಬಲ್ಲುದು ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವೇದಿಕೆಯಲ್ಲಿ ವಿಜ್ಞಾನ ವಿಭಾಗದ ಡೀನ್ ಯಶ್ವಂತ್ ಎಂ ಡಿ, ಹಾಗೂ ವಿಜ್ಞಾನ ವೇದಿಕೆಯ ನಿರ್ದೇಶಕರಾದ ರೋಹಿತ್ ಕುಮಾರ್ ಟಿ ಹಾಗೂ ಆಶಾಲತಾ ಕೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನಕ್ಕೆ ಸಂಬAಧಪಟ್ಟAತೆ ಹಲವಾರು ಸ್ಪರ್ಧೆಗಳನ್ನು ಆಯೋಜಿಸಿದ್ದು, ವಿಜೇತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಜೇನಿಷಾ ಸ್ವಾಗತಿಸಿ, ಪ್ರಜ್ವಲ್ ವಂದಿಸಿ, ಲವೀನಾ ಕಾರ್ಯಕ್ರಮವನ್ನು ನಿರೂಪಿಸಿದರು.