Recent Posts

Sunday, January 19, 2025
ಉಡುಪಿಸುದ್ದಿ

ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ‘ಸಮಗ್ರ ಗೋವಿಂದ ಪೈ ಸಂಶೋಧನ ಸಂಪುಟ’ ಕೊಡುಗೆ-ಕಹಳೆ ನ್ಯೂಸ್

ಉಡುಪಿ: ಸಾವಿರಕ್ಕೂ ಅಧಿಕ ಸಂಶೋಧನ ಲೇಖನಗಳನ್ನು ಸಂಗ್ರಹಿಸಿ 1995ರಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರವು ಪ್ರಕಟಿಸಿದ 1400 ಪುಟಗಳ ಸಮಗ್ರ ಗೋವಿಂದ ಪೈ ಸಂಶೋಧನ ಸಂಪುಟವನ್ನು ಬುಧವಾರ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ಹಸ್ತಾಂತರಿಸಲಾಯಿತು.

ಉಡುಪಿ ಪತ್ರಿಕಾ ಭವನದಲ್ಲಿ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ, ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅವರಿಗೆ ಸಂಪುಟವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪ್ರೊ.ಮುರಳೀಧರ ಉಪಾಧ್ಯ ಹಾಗೂ ಡಾ.ಪಾದೇಕಲ್ಲು ವಿಷ್ಣು ಭಟ್ಟ, ಕೇಂದ್ರದ ಸಹಸಂಶೋಧಕ ಡಾ.ಅರುಣ್ ಕುಮಾರ ಎಸ್.ಆರ್., ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಹಾಜರಿದ್ದರು.
ಸಂಘದ ಗ್ರಂಥಾಲಯದಲ್ಲಿ ಲಭ್ಯ ಇರುವ ಗ್ರಂಥವನ್ನು ಪತ್ರಕರ್ತರು, ಪತ್ರಿಕೋದ್ಯಮ ವಿದ್ಯಾರ್ಥಿಗಳು ಹಾಗೂ ಆಸಕ್ತರು ಓದಬಹುದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು