ಪುತ್ತೂರು: ಹಿಂದೂ ಬಾಲಕಿಯ ಮೈಮುಟ್ಟಿ ವಿಕೃತಿ ಮೆರೆದಿದ್ದ ಮಹಮ್ಮದ್ ಮುಸ್ತಫಾ : ಒಂಭತ್ತು ವರ್ಷದ ಹಿಂದಿನ ಪ್ರಕರಣಕ್ಕೆ ಮಹತ್ವದ ತೀರ್ಪು ಕೊಟ್ಟ ಕೋರ್ಟ್..!–ಕಹಳೆ ನ್ಯೂಸ್
ಪುತ್ತೂರು:- ಒಂಭತ್ತು ವರ್ಷದ ಹಿಂದೆ ಕಬಕ ಗ್ರಾಮದಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಕಾಮುಕನಾದ ಆರೋಪಿ ಮೊಹಮ್ಮದ್ ಮುಸ್ತಾಫ ಕೈ ಹಿಡಿದು ಎಳೆದು
ಅನುಚಿತವಾಗಿ ವರ್ತಿಸಿ ತನ್ನ ಕಾಮದಾಹ ತೀರಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಗಾಬರಿಗೊಂಡ ಬಾಲಕಿ ಆತನಿಂದ ತಪ್ಪಿಸಿಕೊಂಡು ಮನೆಯವರಲ್ಲಿ ತನಗಾದ ಕೆಟ್ಟ ಅನುಭವದ ಬಗ್ಗೆ ಹೇಳಿಕೊಂಡಿದ್ದಾಳೆ. ಬಾಲಕಿಯ ತಾಯಿ ನೀಡಿದ ದೂರಿನ ಆಧಾರದಲ್ಲಿ ಪುತ್ತೂರು ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಾರ್ಜ್ ಶೀಟ್ ಸಲ್ಲಿಸಿದ್ದರು. ಇದೀಗ ಈ ಪ್ರಕರಣಕ್ಕೆ ನ್ಯಾಯಾಲಯ ಮಹತ್ವದ ತೀರ್ಪು ನೀಡುವುದರ ಮುಖೇನ ತೆರೆ ಎಳೆದಿದ್ದು ಆರೋಪಿ ಮಹಮ್ಮದ್ ಮುಸ್ತಫಾಗೆ ಶಿಕ್ಷೆ ಹಾಗೂ ದಂಡ ವಿಧಿಸಲು ಕೋರ್ಟ್ ಆದೇಶಿಸಿದೆ.
ಪುತ್ತೂರು ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸರಿತಾ ಡಿ ಅವರ ಪೀಠ ಈ ಪ್ರಕರಣದ ವಿಚಾರಣೆ ನಡೆಸಿದ್ದು ಆರೋಪಿಗೆ ಶಿಕ್ಷೆ ವಿಧಿಸಿ ಜೊತೆಗೆ ದಂಡ ಕೂಡಾ ಕಟ್ಟುವಂತೆ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬAಧಿಸಿ ನ್ಯಾಯಧೀಶರು 14 ಮಂದಿ ಸಾಕ್ಷಿದಾರರನ್ನು ವಿಚಾರಣೆ ನಡೆಸಿದರು. ಆರೋಪಿ ತಪ್ಪಿತಸ್ಥನೆಂದು ಸಾಬೀತಾದ ಹಿನ್ನೆಲೆ ಆತನಿಗೆ ಮೂರು ವರ್ಷ ಜೈಲು ಮತ್ತು 21400 ರೂ. ದಂಡ ವಿಧಿಸಲಾಗಿದೆ. ಆರೋಪಿಗೆ ವಿಧಿಸಲಾದ ದಂಡದ ಮೊತ್ತದಲ್ಲಿ 15000ರೂ.ನ್ನು ಬಾಲಕಿಗೆ ಪರಿಹಾರ ರೂಪದಲ್ಲಿ ನೀಡಬೇಕೆಂದು ಕೋರ್ಟ್ ಖಡಕ್
ತೀರ್ಪು ನೀಡಿದೆ.