Recent Posts

Sunday, January 19, 2025
ಉಡುಪಿಸುದ್ದಿ

ನ.17 ಮತ್ತು ನ.18ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ಸವ ರಜತ ಮಹೋತ್ಸವ – ಕಹಳೆ ನ್ಯೂಸ್

ಉಡುಪಿ : ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮವು ನ.17 ಮತ್ತು ನ.18 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಇಂದು ಶತಮಾನೋತ್ತರ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಕಾರ್ಯಕ್ರಮದ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನ.17 ರ ಬೆಳಗ್ಗೆ 10ಕ್ಕೆ ಉಡುಪಿ ನ್ಯಾಯಾಲಯದ ಆವರಣದಲ್ಲಿ ನಡೆಯುವ ಸಭಾಕಾರ್ಯಕ್ರಮವನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಧೀಶರಾದ ನ್ಯಾ| ಅರವಿಂದ್ ಕುಮಾರ್ ಉದ್ಘಾಟಿಸಲಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯನ್ಯಾಯಾಧೀಶ ನ್ಯಾ| ಎನ್.ವಿ ಅಂಜಾರಿಯಾ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಆಂಧ್ರ ಪ್ರದೇಶದ ರಾಜ್ಯಪಾಲ ನ್ಯಾ| ಎಸ್.ಅಬ್ದುಲ್ ನಜೀರ್ ಸಾಹೇಬ್ ಉಪಸ್ಥಿತರಿರುವರು. ಹೈಕೋರ್ಟ್ ನ್ಯಾಯಾಧೀಶ ಮತ್ತು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾ| ಇ.ಎಸ್. ಇಂದಿರೇಶ್, 125 ರ ಸಂಭ್ರಮದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕಾನೂನು ಸಚಿವ ಎಚ್.ಕೆ. ಪಾಟೀಲ್, ಸಾರ್ವಜನಿಕ ಸೇವಾ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ, ಅಡ್ವೋಕೇಟ್ ಜನರಲ್ ಶಶಿಕಿರಣ್ ಎಸ್. ಶೆಟ್ಟಿ, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಉಪಸ್ಥಿತರಿರುವರು.

ಇದೇ ವೇದಿಕೆಯಲ್ಲಿ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ|ಎಂ.ಜಿ. ಉಮಾ, ನ್ಯಾ|ರಾಮಚಂದ್ರ ಡಿ.ಹುದ್ದಾರ್, ನ್ಯಾ| ಟಿ. ವೆಂಕಟೇಶ್ ನಾಯ್ಕ್ ರವರನ್ನು ಸನ್ಮಾನಿಸಲಾಗುವುದು.

ನ.18 ರ ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಹೈಕೋರ್ಟ್ ನ್ಯಾಯಾಧೀಶ ನ್ಯಾ| ಎಸ್.ವಿಶ್ವಜಿತ್ ಶೆಟ್ಟಿ ವಹಿಸಲಿದ್ದಾರೆ. ಹೈಕೋರ್ಟ್ ನ್ಯಾಯಾಧೀಶರು ಮತ್ತು ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ನ್ಯಾ| ಇ.ಎಸ್. ಇಂದಿರೇಶ್ ಸಮಾರೋಪ ಭಾಷಣ ಮಾಡಲಿದ್ದಾರೆ. ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ| ಶಿವಶಂಕರ್ ಬಿ., ನ್ಯಾ| ಅಮರಣ್ಣವರ್, ನ್ಯಾ| ಸಿ.ಎಂ. ಜೋಷಿ, ನ್ಯಾ| ಟಿ.ಜಿ ಶಿವಶಂಕರೇಗೌಡ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನ್ಯಾ| ಕಿರಣ್.ಎಸ್. ಗಂಗಣ್ಣನವರ್ ಉಪಸ್ಥಿತರಿರುವರು.

ಇದೇ ವೇಳೆ ಉಡುಪಿ ವಕೀಲರ ಸಂಘದ ಸದಸ್ಯರಾಗಿ, ನ್ಯಾಯಾಧೀಶರಾಗಿ ಮತ್ತು ಸರಕಾರಿ ಅಭಿಯೋಜಕರಾಗಿ ಆಯ್ಕೆಯಾಗಿ ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿರುವ ಉಡುಪಿ ವಕೀಲರ ಸಂಘದ ಮಾಜಿ ಸದಸ್ಯರಿಗೆ ಮತ್ತು ವಕೀಲರ ಸಂಘದ ಮಾಜಿ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ಸನ್ಮಾನಿಸಲಾಗುವುದು.

ಮಣಿಪಾಲದ ಕಸ್ತುರ್ಬಾ ಆಸ್ಪತ್ರೆಯಿಂದ ಉಡುಪಿ ವಕೀಲರ ಸಂಘದ ಸದಸ್ಯರಿಗೆ ನೀಡಲಾಗುವ ವಿಶಿಷ್ಟ ಆರೋಗ್ಯ ಕಾರ್ಡನ್ನು ಮಾಹೆಯ ಸಹ ಕುಲಪತಿ ಡಾ. ಎಚ್.ಎಸ್.ಬಲ್ಲಾಳ್ ಇವರ ಸಮ್ಮುಖದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ನ್ಯಾ| ಎಸ್.ವಿ. ಅಂಜಾರಿಯಾ ಬಿಡುಗಡೆ ಮಾಡಲಿರುವರು.

ಹಿರಿಯ ಸಿವಿಲ್ ನ್ಯಾಯಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್. ಯೋಗೇಶ್ ಮಾತನಾಡಿ, ಇದು ಕೇವಲ ವಕೀಲರಿಗೆ ಸಂಬಂಧಿಸಿದ ಕಾರ್ಯಕ್ರಮವಲ್ಲ. ಸಾರ್ವಜನಿಕರು ಮುಕ್ತವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಸಂವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾನೂನಿನ ಬಗ್ಗೆ ಅರಿವನ್ನು ಮೂಡಿಸಿಕೊಳ್ಳಿ ಎಂದು ಕರೆ ನೀಡಿದರು‌.

ಪತ್ರಿಕಾಗೋಷ್ಠಿಯಲ್ಲಿ ಉಡುಪಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಎ.ಆರ್, ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ, ಜಂಟಿ ಕಾರ್ಯದರ್ಶಿ ಬೈಲೂರು ರವೀಂದ್ರ ದೇವಾಡಿಗ,ಖಜಾಂಚಿ ಗಂಗಾಧರ ಹೆಚ್.ಎಂ, ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ವಕೀಲರ ಸಂಘ ವಿವಿಧ ಉಪ ಸಮಿತಿಗಳ ಮುಖ್ಯಸ್ಥರಾದ ಎಂ. ಶಾಂತಾರಾಮ್ ಶೆಟ್ಟಿ, ಅಸದುಲ್ಲಾ ಕಟಪಾಡಿ, ಎನ್.ಕೆ. ಆಚಾರ್ಯ, ಬಿ. ನಾಗರಾಜ್, ಆನಂದ ಮಡಿವಾಳ, ಸತೀಶ್ ಪೂಜಾರಿ, ಅಮೃತಕಲಾ, ಆರೂರು ಸುಕೇಶ್ ಶೆಟ್ಟಿ, ವಕೀಲರಾದ ಶಿವಾನಂದ್ ಆಮೀನ್ ಪಾಂಗಾಳ, ಶಶಿರಾಜ್ ಪೈಯ್ಯಾರ್, ಪ್ರಜ್ವಲ್ ಶೆಟ್ಟಿ, ಆಕಾಶ್ ಅಂಬಾಗಿಲು ಉಪಸ್ಥಿತರಿದ್ದರು.