Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ದಾಸಕೋಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ದಾಸಕೋಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪುಟಾಣಿ ದಿಶ್ಯಾಂತ್ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದು, ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಮಾಡಿ ಬಹುಮಾನ ವಿತರಿಸಲಾಯಿತು ಹಾಗೂ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಶ್ರೀ ರುಕ್ಮಯ ಪೂಜಾರಿ, ಪಂಚಾಯತ್ ಉಪಾಧ್ಯಕ್ಷೆ ರಂಜಿನಿ,ಸದಸ್ಯ ವಿಠಲ ನಾಯ್ಕ, ಬಂಟ್ವಾಳ ರಬ್ಬರ್ ಮತ್ತು ಜೇನು ವ್ಯವಸಾಯ ಸಂಘದ ಉಪಾಧ್ಯಕ್ಷ ಮೋಹನ್ ಪಿ ಎಸ್,ಅಂಗವಾಡಿ ಇಲಾಖೆ ಮೇಲ್ವಿಚಾರಕಿ ಲೀಲಾವತಿ,ಪಿಡಿಓ ಸಂಧ್ಯಾ,ಬಾಲವಿಕಾಸ ಸಮಿತಿ ಸದಸ್ಯರಾದ ಚಂದ್ರಶೇಖರ್, ಹಿರಿಯರಾದ ಕಲಾವತಿ ಭಟ್, ಸವಿತಾ ಗೋಪಾಲ್, ಅಂಗನವಾಡಿ ಕಾರ್ಯಕರ್ತೆ ಲಲಿತಾ, ಸಹಾಯಕಿ ಯಶೋಧ, ಸಲಹಾ ಸಮಿತಿ ಅಧ್ಯಕ್ಷೆ ಶುಭ, ಯೋಗ ಶಿಕ್ಷಕಿ,ಶ್ರೀಕೃಷ್ಣ , ಶ್ರೀದೇವಿ, ಶ್ರೀ ರಾಮ ಮತ್ತು ಶ್ರೀ ದುರ್ಗಾ ಸ್ತ್ರೀ ಶಕ್ತಿ ಸದಸ್ಯರು, ಪುಟಾಣಿಗಳು, ಪೋಷಕರು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು