Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ-ಕಹಳೆ ನ್ಯೂಸ್

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ನಾಗವಳಚ್ಚಿಲ್‌ನ ವೃದ್ಧ ರೊಬ್ಬರು ನ. 5ರಂದು ಮನೆಯಿಂದ ಹೊರ ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದು, ಅದೇ ದಿನ ಉಳ್ಳಾಲದ ರೈಲು ಹಳಿಯಲ್ಲಿ ಮೃತದೇಹ ವೊಂದು ಪತ್ತೆಯಾಗಿದೆ.

ನಾಗವಳಚ್ಚಿಲ್ ನಿವಾಸಿ ಉಗ್ಗಪ್ಪ ಪೂಜಾರಿ (70) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನ. 5ರಂದು ಪಾಣೆಮಂಗಳೂರಿನ ಬ್ಯಾಂಕ್ ಶಾಖೆಯೊಂದಕ್ಕೆ ಹೋಗಿ ತನ್ನ ವೃದ್ಧಾಪ್ಯ ವೇತನದ ಹಣವನ್ನು ಡ್ರಾ ಮಾಡಿಕೊಂಡು ಮನೆಗೆ ಬಂದಿದ್ದರು. ಬಳಿಕ ಸೊಸೆಗೆ ಕರೆ ಮಾಡಿ ಏನೋ ಹೇಳಲು ಯತ್ನಿಸಿ ಕರೆ ಕಡಿತ ಮಾಡಿದ್ದು, ಮತ್ತೆ ಕರೆ ಮಾಡಿದರೆ ಸ್ವೀಕರಿಸದೆ ನಾಪತ್ತೆಯಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೊಬೈಲ್ ಕೂಡ ಮನೆಯಲ್ಲೇ ಬಿಟ್ಟು ಹೋಗಿದ್ದರು. ಎಲ್ಲ ಕಡೆ ಹುಡುಕಿದರೂ ಉಗ್ಗಪ್ಪ ಪತ್ತೆಯಾಗದ ಹಿನ್ನೆಲೆಯಲ್ಲಿ ಅವರ ಪುತ್ರ ಅನಿಲ್ ಕುಮಾರ್ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಅದೇ ದಿನ ಉಳ್ಳಾಲ ರೈಲು ಹಳಿಯಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಅದರ ವಾರಸುದಾರರು ಸಿಗದ ಹಿನ್ನೆಲೆಯಲ್ಲಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಗುರುವಾರ ಅವರ ಮನೆಯವರು ಬಂದು ಮೃತದೇಹವನ್ನು ಅವರದ್ದೇ ಎಂದು ಖಚಿತಪಡಿಸಿಕೊಂಡಿದ್ದಾರೆ. ಘಟನೆಯ ಕುರಿತು ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.