Sunday, January 19, 2025
ದಕ್ಷಿಣ ಕನ್ನಡಮಂಗಳೂರುವಾಣಿಜ್ಯಶಿಕ್ಷಣಸುದ್ದಿ

ರಾಜ್ಯ ಮಟ್ಟದ ಸಹಕಾರ ರತ್ನ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಸಹಕಾರಿ ವಿನಯಕುಮಾರ್ ಸೂರಿಂಜೆ ಮತ್ತು ಡಾ. ಎಸ್ ಆರ್ ಹರೀಶ್ ಆಚಾರ್ಯ – ಕಹಳೆ ನ್ಯೂಸ್

ಮಂಗಳೂರು : ಸಹಕಾರ ಕ್ಷೇತ್ರದ ಸಾಧನೆಗಾಗಿ ನೀಡಲಾಗುವ ಸಹಕಾರ ರತ್ನ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷರಾದ, ಹಿರಿಯ ಸಹಕಾರಿ ವಿನಯಕುಮಾರ್ ಸೂರಿಂಜೆ ಮತ್ತು ವಿಶ್ವಕರ್ಮ ಸಹಕಾರ ಬ್ಯಾಂಕ್ ಹಾಗೂ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಇವರು ಆಯ್ಕೆಯಾಗಿದ್ದಾರೆ.

ರಾಜ್ಯದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಹಕಾರ ರತ್ನ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿದ್ದು, ರಾಜ್ಯಾದ್ಯಂತ ಒಟ್ಟು 72 ಮಂದಿಗೆ ಪುರಸ್ಕಾರ ಘೋಷಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕರಾವಳಿಯ ಉಭಯ ಜಿಲ್ಲೆಗಳಿಂದ ಶ್ರೀ ವಿನಯಕುಮಾರ್ ಸೂರಿಂಜೆ ಮತ್ತು ಡಾ. ಎಸ್ ಆರ್ ಹರೀಶ್ ಆಚಾರ್ಯ ಮಾತ್ರವಲ್ಲದೇ, ಕಂಬದಕೋಣೆ ರೈತರ ಸೇವಾ ಸಹಕಾರ ಸಂಘ ನಿ. ಉಪ್ಪುಂದ ಇದರ ಅಧ್ಯಕ್ಷರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಮೇಕೋಡು, ಇತರೇ ಸಹಕಾರ ಸಂಘಗಳ ನೌಕರರ ಒಕ್ಕೂಟ ನಿ. ಉಡುಪಿ ಇದರ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿಯಂಗಡಿ, ವಿಜಯಾ ಬ್ಯಾಂಕ್ ನೌಕರರ ಹೌಸಿಂಗ್ ಕೋಆಪರೇಟಿವ್ ಸೊಸೈಟಿ ಲಿ. ಇದರ ಮಾಜಿ ಅಧ್ಯಕ್ಷರಾದ ಎ.ನವೀನ್ ಭಂಡಾರಿ ಪುತ್ತೂರು ಇವರುಗಳು ಆಯ್ಕೆಯಾಗಿದ್ದಾರೆ. ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಯಾಗಿರುವ ಹಿರಿಯ ಸಹಕಾರಿಗಳಾದ ಶ್ರೀ ವಿನಯಕುಮಾರ್ ಸೂರಿಂಜೆಯವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾಗಿ ಮಾತ್ರವಲ್ಲದೇ, ಮಂಗಳೂರು ತಾಲೂಕು ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷರಾಗಿ ಹಾಗೂ ಸುರತ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾಗಿ ಕೂಡ ಸೇವೆ ಸಲ್ಲಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಡಾ. ಎಸ್ ಆರ್ ಹರೀಶ್ ಆಚಾರ್ಯ ಇವರು, ಪ್ರಸ್ತುತ ವಿಶ್ವಕರ್ಮ ಸಹಕಾರ ಬ್ಯಾಂಕ್ನ ಅಧ್ಯಕ್ಷರಾಗಿ ಹಾಗೆಯೇ ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಾಣಿಜ್ಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರಾಗಿರುವ ಇವರು, ಮೈಸೂರು ವಿಶ್ವವಿದ್ಯಾನಿಲಯದ ಗಾಂಧಿ ಅಧ್ಯಯನ ಕೇಂದ್ರದ ಅಡಿಯಲ್ಲಿ ‘ಗಾಂಧೀಜಿ ಪರಿಕಲ್ಪನೆಯ ಆದರ್ಶ ಗ್ರಾಮದ ಅನುμÁ್ಠನದಲ್ಲಿ ಸಹಕಾರ ಸಂಘಗಳು: ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಯನ’ ಎಂಬ ವಿಷಯದಲ್ಲಿ ಸಂಶೋಧನಾ ಪ್ರಬಂಧವನ್ನು ಮಂಡಿಸಿ Ph.D ಪದವಿಯನ್ನು ಪಡೆದುಕೊಂಡಿದ್ದಾರೆ. ಸಹಕಾರ ಕ್ಷೇತ್ರದ ಅಧ್ಯಯನ ಮತ್ತು ಸಂಶೋಧನಾ ಕಾರ್ಯದ ಮಹತ್ವವನ್ನು ಮನಗಂಡು ‘ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆ’ (ಸ್ಪಂದನ) ಯನ್ನು ಸ್ಥಾಪಿಸಿ ಈ ಮೂಲಕ ಸಹಕಾರ ಕ್ಷೇತ್ರದ ಆಮೂಲಾಗ್ರ ಅಭಿವೃದ್ಧಿಗಾಗಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ. ತಮ್ಮ ಸ್ಪಂದನ ಸಂಸ್ಥೆಯ ಮಾರ್ಗದರ್ಶನದಲ್ಲಿ ʼಸ್ಪಂದನ ಕೋ ಆಪರೇಟಿವ್‍ಸೊಸೈಟಿ ಲಿ.ʼ ಮತ್ತು ʼಯುವ ಸ್ಪಂದನ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ.ʼ ಹೆಸರಿನ ಸಹಕಾರ ಸಂಸ್ಥೆಗಳನ್ನು ಸ್ಥಾಪಿಸುವುದರೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣದ ದೃಷ್ಟಿಯಲ್ಲಿ ಸ್ಪಂದನ ಸ್ವಸಹಾಯ ಗುಂಪುಗಳನ್ನು ರಚಿಸಿ ಈ ಮೂಲಕ ದೇಶದ ಆರ್ಥಿಕ ಸೇರ್ಪಡೆಗೆ ತಮ್ಮ ಕೊಡುಗೆಯನ್ನು ನೀಡುತ್ತಿದ್ದಾರೆ. ತಮ್ಮ ಹುಟ್ಟೂರಾದ ಮಂಗಳೂರು ತಾಲೂಕಿನ ಬೋಳಿಯಾರು ಗ್ರಾಮದ ಧರ್ಮನಗರದಲ್ಲಿ ಸುಮಾರು 18 ವರ್ಷಗಳ ಹಿಂದೆ ʼಧರ್ಮನಗರ ಹಾಲು ಉತ್ಪಾದಕರ ಸಹಕಾರ ಸಂಘʼವನ್ನು ಸ್ಥಾಪಿಸುವ ಮೂಲಕ ಸಹಕಾರ ಕ್ಷೇತ್ರಕ್ಕೆ ಬಂದ ಇವರು, ʼದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್‍ಲಿ.ʼ ಇದರ ಅಧ್ಯಕ್ಷರಾಗಿ ಒಂದು ಅವಧಿಯಲ್ಲಿ ಕಾರ್ಯನಿರ್ವಹಿಸಿ ಸಹಕಾರ ಕ್ಷೇತ್ರಕ್ಕೆ ಸಮರ್ಥ ನಾಯಕತ್ವವನ್ನು ನೀಡಿದ್ದು, ಪ್ರಸ್ತುತ ಸಹಕಾರ ಯೂನಿಯನ್‍ನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಮೂಲಕ ಸಹಕಾರ ಕ್ಷೇತ್ರದಲ್ಲಿ ನಿರಂತರ ಸಲ್ಲಿಸಿರುವ ಗಣನೀಯ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರ ನೀಡಿರುವ ಸಹಕಾರ ರತ್ನ ಪ್ರಶಸ್ತಿಗೆ ಸಹಜ ಆಯ್ಕೆಯಾಗಿ ಮೂಡಿಬಂದಿದ್ದಾರೆ.