Friday, September 20, 2024
ಸುದ್ದಿ

ಟಿಪ್ಪು ಜಯಂತಿ, ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳುವ ಪ್ರಯತ್ನ ಮಾಡಬಾರದು: ಡಾ.ಸುಮನ್ ಪನ್ನೇಕರ್ – ಕಹಳೆ ನ್ಯೂಸ್

ಮಡಿಕೇರಿ: ನ. 10ರಂದು ನಡೆಯಲಿರುವ `ಟಿಪ್ಪು ಜಯಂತಿ’ಗೆ ಅಗತ್ಯ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳುವ ಪ್ರಯತ್ನವನ್ನು ಯಾರೂ ಮಾಡಬಾರದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಪನ್ನೇಕರ್ ಮನವಿ ಮಾಡಿದ್ದಾರೆ.

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂದರ್ಭದ ದುರ್ಲಾಭ ಪಡೆದು ಶಾಂತಿ ಕದಡುವ ಪ್ರಯತ್ನಗಳಿಗೆ ಮುಂದಾಗುವ ಯಾವುದೇ ಪ್ರಯತ್ನಗಳು ಕಂಡು ಬಂದಲ್ಲಿ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಅಂತಹವರನ್ನು ಬಂಧಿಸಲಿದೆಯೆಂದು ಎಚ್ಚರಿಕೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿ, ಸೋಮವಾರಪೇಟೆ , ವೀರಾಜಪೇಟೆ ಸೇರಿದಂತೆ ಜನ ನಿಬಿಡ ಪ್ರದೇಶಗಳಲ್ಲಿ ತಾತ್ಕಾಲಿಕವಾದ 200 ಸಿಸಿ ಟಿವಿಗಳನ್ನು ಅಳವಡಿಸಲಾಗಿದ್ದು, ಪ್ರತಿಯೊಂದು ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆಯೆಂದು ಮಾಹಿತಿ ನೀಡಿದರು.

ಜಾಹೀರಾತು

ಜಿಲ್ಲೆಯ ಅಂಚಿನಲ್ಲಿರುವ ಕೇರಳ, ವಯನಾಡು, ಕಾಸರಗೋಡು ಹಾಗೂ ಹಾಸನ ಜಿಲ್ಲೆ, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗೆ ಹೊಂದಿಕೊಂಡಂತೆ 10 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಮಾಡಲಾಗಿದ್ದು, ಇವುಗಳ ಮೂಲಕ ಹೊರ ಜಿಲ್ಲೆಯಿಂದ ಬರುವ ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸುವ `ನಾಕಾಬಂದಿ’ ಕಾರ್ಯವನ್ನು ಮಾಡಲಾಗುತ್ತಿದೆ. ಆ ಮೂಲಕ ಕಿಡಿಗೇಡಿಗಳು ಜಿಲ್ಲೆಗೆ ಬಂದು ದುಷ್ಕೃತ್ಯಗಳನ್ನು ನಡೆಸಲು ಮುಂದಾಗದಂತೆ ನಿಗಾ ವಹಿಸಲಾಗಿದೆ. ಈ ಚೆಕ್ ಪೋಸ್ಟ್ ಗಳಲ್ಲಿ ತಲಾ 4ರಂತೆ ಒಟ್ಟು 40 ಸಿಸಿ ಟಿವಿಗಳನ್ನು ಅಳವಡಿಸಲಾಗಿದೆಯೆಂದು ತಿಳಿಸಿದರು.

ಟಿಪ್ಪು ಜಯಂತಿಯ ಬಂದೋಸ್ತ್ ಗೆ ಜಿಲ್ಲೆ ಹಾಗೂ ಹೊರ ಜಿಲ್ಲೆಯ 1500 ರಿಂದ 2 ಸಾವಿರ ಪೊಲೀಸ್ ಸಿಬ್ಬಂದಿಗಳು ಅಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಚಾಮರಾಜನಗರದ ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನು ಜಿಲ್ಲೆಗೆ ನಿಯುಕ್ತಿಮಾಡಲಾಗಿದೆ, 6 ಡಿವೈಎಸ್‍ಪಿ, 20 ಪೊಲೀಸ್ ಇನ್ಸ್‍ಪೆಕ್ಟರ್, 46 ಸಬ್ ಇನ್ಸ್‍ಪೆಕ್ಟರ್, 104 ಎಎಸ್‍ಐ, 300 ಹೋಂ ಗಾಡ್ರ್ಸ್, 850 ಪೊಲೀಸ್ ಸಿಬ್ಬಂದಿಗಳು, 21 ಡಿಎಆರ್ ತುಕಡಿಗಳು, 10 ಕೆಎಸ್‍ಆರ್‍ಪಿ ತುಕಡಿಗಳನ್ನು ಹಾಗೂ ರ್ಯಾಪಿಡ್ ಆಕ್ಷನ್ ಫೋರ್ಸ್‍ನ್ನು ನಿಯುಕ್ತಿಗೊಳಿಸಲಾಗಿದೆಯೆಂದು ತಿಳಿಸಿದರು.