Sunday, January 19, 2025
ದಕ್ಷಿಣ ಕನ್ನಡಸುದ್ದಿ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಕಡಬ: ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವು ನವಂಬರ್ 15 ರಂದು ಸಂಸ್ಥೆಯ ಸಭಾAಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಿದ್ಯಾರ್ಥಿ ಸಂಘದ ಸಭಾಪತಿ ಮೋಕ್ಷಿತ್ ಬಿ 10ನೇ ತರಗತಿ ವಹಿಸಿ ಅಧ್ಯಕ್ಷ ನುಡಿಗಳನ್ನಾಡಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಹಿರಿಯ ವಿದ್ಯಾರ್ಥಿ, ವಿದೇಶದಲ್ಲಿ ಉದ್ಯೋಗಿಯಾಗಿರುವ ಪ್ರಜ್ವಲ್ ವೈ ಆಗಮಿಸಿ, ತಮ್ಮ ವಿದ್ಯಾರ್ಥಿ ಜೀವನದ ನೆನಪನ್ನು ಹಂಚಿಕೊAಡರು.

ಜಾಹೀರಾತು
ಜಾಹೀರಾತು
ಜಾಹೀರಾತು

ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ರವಿರಾಜ್ ಶೆಟ್ಟಿ ಕಡಬ ಹಾಗೂ ಕೋಶಾಧಿಕಾರಿಗಳಾದ ಶ್ರೀ ಲಿಂಗಪ್ಪ ಜೆ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಪಂದ್ಯಾಟಗಳಲ್ಲಿ ವಿಜೇತರಾದವರಿಗೆ
ಬಹುಮಾನವನ್ನು ಅತಿಥಿಗಳು ವಿತರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ಭುತವಾಗಿ
ಮೂಡಿ ಬಂದವು. ವೇದಿಕೆಯಲ್ಲಿ ಸಂಸ್ಥೆಯ ಮುಖ್ಯ ಗುರುಗಳಾದ ಶ್ರೀಮತಿ ಶೈಲಶ್ರೀ ರೈ.ಎಸ್, ವಿದ್ಯಾರ್ಥಿ ಸಂಘದ ನಾಯಕರಾದ ವರ್ಷಾ ಎಸ್ ಹಾಗೂ ಪೂರ್ವಿತ್.ಎನ್.ಪಿ, ಸಾಂಸ್ಕೃತಿಕ ಮಂತ್ರಿಗಳಾದ ಯಶಸ್ವಿನಿ, ಹಾಗೂ ಧನ್ಯಕುಮಾರಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪಂದ್ಯಾಟಗಳಿಗೆ ತೀರ್ಪುಗಾರರಾಗಿ ಸಹಕರಿಸಿದ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್ಚಂದ್ರ ಕೆ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರತೀಕ್ಷಾ ಎನ್. ಆರ್ ಸ್ವಾಗತಿಸಿ, ಪ್ರೀತಮ್ ಕೆ ವಂದಿಸಿದರು. ವಿಜೇತರ ಪಟ್ಟಿಯನ್ನು ಶರಣ್ಯ ಜೆ.ಕೆ ವಾಚಿಸಿ ಕುಮಾರಿ ಜಶ್ಮಿ ಕಾರ್ಯಕ್ರಮ ನಿರೂಪಿಸಿದರು.